ನವದೆಹಲಿ: ವೈದ್ಯಕೀಯ ವೆಚ್ಚ ಕಡಿಮೆ ಮಾಡಿ ರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ವೈದ್ಯಕೀಯ ಉಪಕರಣಗಳ ಬೆಲೆ ಮೇಲೆ ನಿಯಂತ್ರಣ ಹೇರಿ ಕೇಂದ್ರ ಸರ್ಕಾರ ಶೀಘ್ರ ಆದೇಶ ಹೊರಡಿಸುವ ಸಾಧ್ಯತೆ ಇದೆ. 

ವೈದ್ಯಕೀಯ ಸಾಮಗ್ರಿಗಳ ಮೇಲೆ ವ್ಯಾಪಾರಿ ಲಾಭವನ್ನು ಗರಿಷ್ಠ ಶೇ.65ಕ್ಕೆ ಸೀಮಿತಗೊಳಿಸಬೇಕು ಎಂದು ನೀತಿ ಆಯೋಗ ಶಿಫಾರಸ್ಸು ಮಾಡಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಅನುಮೋದಿಸುವ ಸಾಧ್ಯತೆಯಿದೆ ಎನ್ನಲಾಗಿದೆ. 

ವೈದ್ಯಕೀಯ ಸಲಕರಣೆಗಳ ಮೇಲೆ ಸಾವಿರಾರು ಪಟ್ಟು ಲಾಭ ಇಟ್ಟು ಮಾರಾಟ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ.