ಇಂದು ರಾಜ್ಯ ಪ್ರಧಾನ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಜೆಪಿ ನಾಯಕ ಯೋಗಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಬಹುತೇಕ ಖಚಿತವೆಂದು ವರದಿಯಾಗಿದೆ.
ಲಕ್ನೋ (ಮಾ. 18): ಉತ್ತರ ಪ್ರದೇಶದ ಮುಂದಿನ ಮುಖ್ಯಮಂತ್ರಿ ಆಯ್ಕೆ ಕಸರತ್ತಿಗೆ ಕೊನೆಗೂ ತೆರೆಬಿದ್ದಿದೆ.
ಇಂದು ರಾಜ್ಯ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ನಾಯಕ ಯೋಗಿ ಆದಿತ್ಯನಾಥ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ.
ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ 32ನೇ ಮುಖ್ಯಮಂತ್ರಿಯಾಗಿ ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ.
ಗೋರಖ್'ಪುರ ಕ್ಷೇತ್ರದಿಂದ 5 ಬಾರಿ ಸಂಸದನಾಗಿ ಆಯ್ಕೆಯಾಗಿರುವ ಆದಿತ್ಯನಾಥ್, 26ನೇ ವಯಸ್ಸಿಗೆ ಸಂಸದನಾಗಿ ಅಯ್ಕೆಯಾಗಿದ್ದರು.
ಮೂಲಗಳ ಪ್ರಕಾರ ಮುಖ್ಯಮಂತ್ರಿ ಗಾದಿಯ ಆಕಾಂಕ್ಷಿಯಾಗಿದ್ದ ಕೇಶವ್ ಪ್ರಸಾದ್ ಮೌರ್ಯ ಹಾಗೂ ದಿನೇಶ್ ಶರ್ಮಾ ಅವರಿಗೆ ಉಪ ಮುಖ್ಯಮಂತ್ರಿಗಳ ಹುದ್ದೆಯನ್ನು ನೀಡಲಾಗಿದೆ.
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 312 ಸ್ಥಾನಗಳನ್ನು ಪಡೆಯುವ ಮೂಲಕ ಉತ್ತರ ಪ್ರದೇಶದಲ್ಲಿ ಜಯಭೇರಿ ಬಾರಿಸಿತ್ತು.
