ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಪರಿಶೀಲನೆ ನಡೆಸಿದೆ. ಇಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನಿವಾಸದಲ್ಲಿ ನಡೆದ ದಲಿತ ಕುಟುಂಬಗಳ ಜೊತೆ ಭೋಜನ ಕೂಟದಲ್ಲಿ ಮಾದಾರ ಚನ್ನಯ್ಯ ಸ್ವಾಮೀಜಿ ಕೂಡಾ ಪಾಲ್ಗೊಂಡಿದ್ದರು. ಈ ಎಲ್ಲಾ ವಿಚಾರಗಳಿಗೆ ಪುಷ್ಠಿ ಒದಗಿಸಿದೆ. ಇದರ ಜೊತೆಯಲ್ಲೇ ಈ ಕುರಿತು  ಕಾಲ ಬಂದಾಗ ನೋಡೋಣ ಎಂದು ಪೂರಕವಾಗಿ ಪ್ರತಿಕ್ರಿಯಿಸಿದ್ದಾರೆ.

ಮುಂಬರುವ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಮಣೆ ಹಾಕಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ಈ ಪೈಕಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು 2019ರ ಲೋಕಸಭಾ ಚುನಾವಣೆಗೆ ಕಣಕ್ಕಿಳಿಸುವ ನಿಟ್ಟಿನಲ್ಲಿ ಬಿಜೆಪಿ ಪ್ಲಾನ್ ಮಾಡಿದೆ.