5 ರಾಜ್ಯಗಳಿಗೆ ಹೊಸ ರಾಜ್ಯಪಾಲರು: ಯಾರಿಗೆ ಯಾವ ಸೂರು?
ಒಟ್ಟು 5 ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕ| ತೆಲಂಗಾಣ, ಕೇರಳ, ಹಿಮಾಚಲ ಪ್ರದೇಶ ಮಹಾರಾಷ್ಟ್ರ ರಾಜಸ್ಥಾನ| ನೂತನ ರಾಜ್ಯಪಾಲರನ್ನು ನೇಮಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶ| ತೆಲಂಗಾಣಕ್ಕೆ ರಾಜ್ಯಪಾಲರಾಗಿ ತಮಿಳುನಾಡು ಬಿಜೆಪಿ ಮುಖ್ಯಸ್ಥೆ| ಹಿಮಾಚಲ ಪ್ರದೇಶದ ನೊಗ ಹೊತ್ತ ಬಂಡಾರು ದತ್ತಾತ್ರೇಯ|
ನವದೆಹಲಿ(ಸೆ.01): ಮಹತ್ವದ ಬೆಳವಣಿಗೆಯಲ್ಲಿ ತೆಲಂಗಾಣ, ಕೇರಳ, ಹಿಮಾಚಲ ಪ್ರದೇಶ ಮಹಾರಾಷ್ಟ್ರ ರಾಜಸ್ಥಾನ ಸೇರದಿಂತೆ ಒಟ್ಟು 5 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ.
ತಮಿಳುನಾಡು ರಾಜ್ಯ ಬಿಜೆಪಿ ಮುಖ್ಯಸ್ಥೆ ತಮಿಳುಸಾಯಿ ಸೌಂದರರಾಜನ್ ಅವರನ್ನು ತೆಲಂಗಾಣ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದ್ದು, ಮಾಜಿ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಇದೇ ವೇಳೆ ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಕಲ್ರಾಜ್ ಮಿಶ್ರಾ ಅವರನ್ನುರಾಜಸ್ಥಾನದ ರಾಜ್ಯಪಾಲರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಇನ್ನು ಮಹಾರಾಷ್ಟ್ರದ ರಾಜ್ಯಪಾಲರಾಗಿ ಭಗತ್ ಸಿಂಗ್ ಕೋಶ್ಯರಿ ಅವರನ್ನು ನೇಮಕ ಮಾಡಲಾಗಿದ್ದು, ಕೇರಳ ರಾಜ್ಯಪಾಲರಾಗಿ ಆರಿಫ್ ಮೊಹ್ಮದ್ ಖಾನ್ ಆಯ್ಕೆಯಾಗಿದ್ದಾರೆ.
5 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶ ಹೊರಡಿಸಿದ್ದಾರೆ.