Asianet Suvarna News Asianet Suvarna News

ಗಣಪತಿ ಪ್ರಕರಣ: ಸಿಬಿಐ ತನಿಖೆ ಕೋರಿ ಮತ್ತೆ ಅರ್ಜಿ

New petition to CBI enquiry for Ganpati case

ಬೆಂಗಳೂರು(ಅ.4): ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ಏಕಸದಸ್ಯ ಪೀಠದ ಕ್ರಮ ಪ್ರಶ್ನಿಸಿ ದ್ವಿ ಸದಸ್ಯ ಪೀಠದಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

ಗಣಪತಿ ತಂದೆ ಎಂ.ಕೆ. ಕುಶಾಲಪ್ಪ ಹಾಗೂ ಸಹೋದರ ಎಂ.ಕೆ. ಮಾಚಯ್ಯ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಮತ್ತು ನ್ಯಾ. ಆರ್.ಬಿ.ಬೂದಿಹಾಳ್ ಅವರಿದ್ದ ನ್ಯಾಯಪೀಠ, ನಾಲ್ಕುವಾರಗಳ ಕಾಲ ಮುಂದೂಡಿತು.

ಅಪರೂಪದ ಪ್ರಕರಣವಾಗಿದ್ದರೆ ಮತ್ತು ತನಿಖೆಯ ಮೇಲೆ ಸಾಕಷ್ಟು ಅನುಮಾನಗಳು ಉದ್ಭವಿಸಿದ್ದ ಪ್ರಕರಣಗಳನ್ನು ಮಾತ್ರ ನ್ಯಾಯಾಲಯಗಳು ಸಿಬಿಐ ತನಿಖೆಗೆ ವಹಿಸಬಹುದು ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಆದೇಶ ನೀಡಿದೆ ಎಂದು ಆಭಿಪ್ರಾಯ ಪಟ್ಟಿದ್ದ ಏಕ ಸದಸ್ಯಪೀಠ ಅರ್ಜಿಯನ್ನು ಸೆ.20ರಂದು ವಜಾಗೊಳಿಸಿತ್ತು.

ಈ ಪ್ರಕರಣದಲ್ಲಿ ಇಲ್ಲಿಯವರೆಗೂ ಯಾವುದೇ ಆರೋಪಿಯನ್ನು ಬಂಸಿಲ್ಲ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್‌ನೋಟ್ ಇಡಲಾಗಿತ್ತು. ಅಲ್ಲದೆ, ಗಣಪತಿ ಆತ್ಮಹತ್ಯೆಗೂ ಮುನ್ನ ಗೃಹ ಸಚಿವರಾಗಿದ್ದ ಕೆ.ಜೆ.ಜಾರ್ಜ್ ಮತ್ತು ಹಿರಿಯ ಐಪಿಎಸ್ ಅಕಾರಿಗಳಾದ ಪ್ರಣವ್ ಮೊಹಾಂತಿ ಮತ್ತು ಎ.ಎಂ.ಪ್ರಸಾದ್ ಅವರ ವಿರುದ್ಧ ಆರೋಪ ಮಾಡಿದ್ದಾರೆ. ಆದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Follow Us:
Download App:
  • android
  • ios