ರಾಜ್ಯದಲ್ಲಿ ದೇವರಾಜ ಅರಸು ಸರ್ಕಾರದ ಅವಧಿಯಲ್ಲೇ ಭೂಸುಧಾರಣೆ ಕಾಯ್ದೆ ಜಾರಿಯಾದರೂ ಮಲೆನಾಡು-ಕರಾವಳಿ ಭಾಗ ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಹೀಗಾಗಿ ಮತ್ತೊಮ್ಮೆ ಅರ್ಹ ಗೇಣಿದಾರರಿಗೆ ‘ಭೂ ಒಡೆತನ ನೀಡಲು ಅಡ್ಡಿಯಾಗಿರುವ ಕಾನೂನು ತೊಡಕುಗಳನ್ನು ನಿವಾರಿಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ಬೆಂಗಳೂರು(ಸೆ.16): ರಾಜ್ಯದಲ್ಲಿ ದೇವರಾಜ ಅರಸು ಸರ್ಕಾರದ ಅವಧಿಯಲ್ಲೇ ಭೂಸುಧಾರಣೆ ಕಾಯ್ದೆ ಜಾರಿಯಾದರೂ ಮಲೆನಾಡು-ಕರಾವಳಿ ಭಾಗ ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಹೀಗಾಗಿ ಮತ್ತೊಮ್ಮೆ ಅರ್ಹ ಗೇಣಿದಾರರಿಗೆ ‘ಭೂ ಒಡೆತನ ನೀಡಲು ಅಡ್ಡಿಯಾಗಿರುವ ಕಾನೂನು ತೊಡಕುಗಳನ್ನು ನಿವಾರಿಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ಇನಾಮುದಾರರ ಜಮೀನನ್ನು ಗೇಣಿ ಮಾಡುತ್ತಿರುವವರಿಗೆ ಹಂಚಿಕೆ ಮಾಡಲು 14 ಕಾನೂನುಗಳ ತೊಡಕಿದೆ. ಈ ಕಾನೂನುಗಳಿಗೆ ಸೂಕ್ತ ತಿದ್ದುಪಡಿ ಮಾಡಲು ನಿ‘ರ್ರಿಸಿದ್ದೇವೆ. ಪ್ರಸ್ತಾವನೆಯನ್ನು ಮುಂದಿನ ಅಧಿವೇಶನದಲ್ಲಿ ವಿಷಯ ಮಂಡನೆ ಮಾಡಲಾಗುವುದು. ಬಳಿಕ ಅರ್ಹ ಗೇಣಿದಾರರಿಗೆ ಭೂ ಮಾಲೀಕತ್ವವನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಳುವವನೇ ಭೂಮಿಯ ಒಡೆಯ ಎಂಬ ಕಾನೂನನ್ನು ಅರಸು ಅವರ ಕಾಲದಲ್ಲಿ ಜಾರಿ ಮಾಡಲಾಯಿತು. ಈ ವೇಳೆ ಕಾಗೋಡು ಚಳವಳಿಯ ಅರಿವು ಇದ್ದಂತಹ ಮಲೆನಾಡು ಜಿಲ್ಲೆಗಳಲ್ಲಿ ಭಾಗಶಃ ಅನುಷ್ಠಾನವಾಯಿತು. ಆದರೆ ಉಳಿದ ಜಿಲ್ಲೆಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿಲ್ಲ. ಹೀಗಾಗಿ ಬಹುತೇಕ ಕಡೆಗ ಳಲ್ಲಿ ಗೇಣಿದಾರರಿಗೆ ಭೂ ಹಕ್ಕು ದೊರೆಯಲಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಈಗಲೂ 25 ಸಾವಿರ ಎಕರೆಯಷ್ಟು ಭೂಮಿ ಗೇಣಿ ಪದ್ಧತಿಯಲ್ಲಿ ನಡೆಯುತ್ತಿದೆ. ಉಳುವವರಿಗೆ ಭೂಮಿಯ ಹಕ್ಕು ಸಿಗುತ್ತಿಲ್ಲ ಎಂಬುದು ಸರ್ಕಾರಕ್ಕೆ ಗಮನಕ್ಕೆ ಬಂದಿದೆ. ಹೀಗಾಗಿ ಭೂಮಿಯ ಹಕ್ಕನ್ನು ಅರ್ಹರಿಗೆ ಕಾನೂನು ಪ್ರಕಾರ ಹಂಚಲು ಕ್ರಮ ಕೈಗೊಳ್ಳಲಾಗುವುದು ಎಂದರು.

94 ಸಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಗೆ ಚಿಂತನೆ:

ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಸಕ್ರಮ ಮಾಡಿಕೊಳ್ಳಲು 94 ಸಿ ಅರ್ಜಿ ಸಲ್ಲಿಸಲು ಅಗತ್ಯವಿದ್ದರೆ ಅಂತಿಮ ಅವಧಿ ವಿಸ್ತರಣೆಗೆ ಚಿಂತನೆ ನಡೆಸಿದ್ದೇವೆ. ಈ ಬಗ್ಗೆ ಇನ್ನೂ ಏನೂ ಕ್ರಮ ಕೈಗೊಂಡಿಲ್ಲ. ಪ್ರಸ್ತುತ 94-ಸಿಸಿ ಅಡಿ 49 ಸಾವಿರ ಅರ್ಜಿಗಳು ವಿಲೇವಾರಿಯಾಗಿದ್ದು, 1.18 ಲಕ್ಷ ಅರ್ಜಿಗಳ ವಿಲೇವಾರಿ ಬಾಕಿ ಉಳಿದಿದೆ. 94-ಸಿ ಅರ್ಜಿಗಳು 2.61 ಲಕ್ಷ ವಿಲೇವಾರಿಯಾಗಿದ್ದು, 2.76 ಲಕ್ಷ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿವೆ. ಇನ್ನೂ ಹಲವು ಮಂದಿ ಅರ್ಜಿ ಸಲ್ಲಿಸುವುದು ಬಾಕಿ ಇದ್ದು, ಅಗತ್ಯವಿದ್ದರೆ ಅವಧಿ ವಿಸ್ತರಣೆ ಮಾಡಲಾಗುವುದು ಎಂದು ಕಾಗೋಡು ತಿಮ್ಮಪ್ಪ ತಿಳಿಸಿದರು.

ಮಹಾರಾಷ್ಟ್ರ ಮಾದರಿ ಮೌಢ್ಯ ಪ್ರತಿಬಂಧಕ ಕಾಯ್ದೆ:

ರಾಜ್ಯದಲ್ಲಿ ಮೌಢ್ಯ ನಿಷೇಧ ಕಾಯ್ದೆ ಶೀಘ್ರದಲ್ಲೇ ಜಾರಿಗೆ ತರುತ್ತೇವೆ. ಆದರೆ ನೂರಾರು ವರ್ಷಗಳಿಂದ ಆಚರಣೆಯಲ್ಲಿರುವ ಮೌಢ್ಯಗಳು ಕಾನೂನು ರೂಪಿಸುವುದು ಹಾಗೂ ಭಾಷಣ ಮಾಡುವುದರಿಂದ ನಿಷೇ‘ ಆಗುವುದಿಲ್ಲ. ಇದರ ಬಗ್ಗೆ ಎಲ್ಲಾ ಸಾರ್ವಜನಿಕರಿಗೆ ಅರಿವು ಮೂಡಬೇಕಾಗಿದೆ. ಕುರಿ, ಕೋಳಿ ಕೊಯ್ಯುವುದು ಸಹ ಮೌಢ್ಯಾಚರಣೆಯೇ. ಹಾಗಂತ ಇದನ್ನು ವಿರೋಧ ಮಾಡಲು ಸಾಧ್ಯವಿಲ್ಲ. ಮೌಢ್ಯಾಚಾರಣೆ ಹೆಸರಿನಲ್ಲಿ ಮನುಷ್ಯರ ಶೋಷಣೆ ಮಾಡುವುದನ್ನು ವಿರೋಧಿಸಬೇಕಾಗಿದೆ. ಇದಕ್ಕಾಗಿ ಮಹಾರಾಷ್ಟ್ರ ಮಾದರಿಯಲ್ಲಿ ಮೌಢ್ಯ ಪ್ರತಿಬಂಧಕ ಕಾನೂನು ಜಾರಿಗೆ ಮಾಡಲಾಗುವುದು ಎಂದರು.

ಪರಿಹಾರಕ್ಕೆ ಕೇಂದ್ರದ ಮೊರೆ:

ರಾಜ್ಯದಲ್ಲಿ ಬರಗಾಲದಿಂದ ತೆಂಗು ಹಾಗೂ ಅಡಿಕೆ ಬೆಳೆಗಾರರಿಗೆ ಉಂಟಾಗಿರುವ ನಷ್ಟಕ್ಕೆ 4,500 ಕೋಟಿ ನಷ್ಟ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ರಾಜ್ಯದಲ್ಲಿ ಈ ಬಾರಿಯೂ ಶೇ.30ರಷ್ಟು ಮಳೆ ಕೊರತೆ ಉಂಟಾಗಿದೆ. ಶೇ.25ರಷ್ಟು ಭೂಮಿಯಲ್ಲಿ ಬಿತ್ತನೆ ಕಾರ್ಯಗಳು ನಡೆದಿಲ್ಲ. 3 ಸಾವಿರ ಹೆಕ್ಟೇರ್‌ನಲ್ಲಿ ತೆಂಗು ಹಾಗೂ 2 ಸಾವಿರ ಹೆಕ್ಟೇರ್‌ನಷ್ಟು ಅಡಿಕೆ ಬೆಳೆಗೆ ಹಾನಿಯಾಗಿದೆ. ಹೀಗಾಗಿ ಕೇಂದ್ರಕ್ಕೆ ಪರಿಹಾರ ನೀಡಲು ಮನವಿ ಮಾಡಿದ್ದು, ಇದರ ಆಧಾರದ ಮೇಲೆ ಪರಿಹಾರವನ್ನು ನೀಡಲು ಅವಕಾಶವಿದೆಯೇ ಎಂಬುದರ ಬಗ್ಗೆ ಪರಿಶೀಲಿಸು ವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಕೇಂದ್ರ ಪರಿಹಾರ ನೀಡದಿದ್ದರೆ ರಾಜ್ಯ ಸರ್ಕಾರದ ವತಿಯಿಂದಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.