ಶೀಘ್ರದಲ್ಲೇ ಇಂತಹ ಶಾಲೆಗಳಿಗೆ ಮೂಗು ದಾರ ಬೀಳಲಿದೆ. ಧಾರ್ಮಿಕ ಸಂಸ್ಥೆಗಳು ಭಕ್ತಾದಿಗಳ ಕಾಣಿಕೆಗಳಿಂದ ಟ್ರಸ್ಟ್ ಮೂಲಕ ನಡೆಸುತ್ತಿರುವ 22 ಶೈಕ್ಷಣಿಕ ಸಂಸ್ಥೆಗಳು ಶಿಕ್ಷಕರ ನೇಮಕಾತಿಯಲ್ಲಿ ಅರ್ಹತಾ ಮಾನದಂಡ, ಮೀಸಲಾತಿ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳದ ಹಿನ್ನೆಲೆಯಲ್ಲಿ ಸ್ಪಷ್ಟ ನಿಯಮಾವಳಿಗಳನ್ನು ರೂಪಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.
ಬೆಂಗಳೂರು : ಧಾರ್ಮಿಕ ಸಂಸ್ಥೆಗಳು ಭಕ್ತಾದಿಗಳ ಕಾಣಿಕೆಗಳಿಂದ ಟ್ರಸ್ಟ್ ಮೂಲಕ ನಡೆಸುತ್ತಿರುವ 22 ಶೈಕ್ಷಣಿಕ ಸಂಸ್ಥೆಗಳು ಶಿಕ್ಷಕರ ನೇಮಕಾತಿಯಲ್ಲಿ ಅರ್ಹತಾ ಮಾನದಂಡ, ಮೀಸಲಾತಿ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳದ ಹಿನ್ನೆಲೆಯಲ್ಲಿ ಸ್ಪಷ್ಟ ನಿಯಮಾವಳಿಗಳನ್ನು ರೂಪಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ದತ್ತಿ ಕಾಯ್ದೆ 2002 ಕ್ಕೆ ತಿದ್ದುಪಡಿ ತಂದು ಅರ್ಹತಾ ಮಾನದಂಡ, ಮೀಸಲಾತಿ, ರೋಸ್ಟರ್ ಪದ್ಧತಿಯನ್ನು ಅನುಸರಿಸಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಬೇಕು ಎಂಬ ನಿರ್ಧಾರವನ್ನು ಕೈಗೊಳ್ಳಲಾಯಿತು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆ ಯಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ಸಚಿವ ಕೃಷ್ಣ ಭೈರೇಗೌಡ, ಶಿಕ್ಷಣ ಇಲಾಖೆ ಸುಪರ್ದಿಗೆ ಬಾರದೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಹಲವು ದೇವಸ್ಥಾನದ ಆಡಳಿತ ಮಂಡಳಿಗಳು ಟ್ರಸ್ಟ್ ಮೂಲಕ ರಾಜ್ಯದ ವಿವಿಧೆಡೆ 22 ಶೈಕ್ಷಣಿಕ ಸಂಸ್ಥೆಗಳನ್ನು ನಡೆಸುತ್ತಿವೆ.
ಮಂಗಳೂರು, ಉಡುಪಿ ಭಾಗದಲ್ಲಿ ಇವು ಹೆಚ್ಚಿದ್ದು, ಇಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುತ್ತಿಲ್ಲ. ಹೀಗಾಗಿ ಪಾರದರ್ಶಕತೆ ತರುವ ಉದ್ದೇಶದಿಂದ ನೇಮಕಾತಿ ನಿಯಮಗಳನ್ನು ರೂಪಿಸಿ ಸಚಿವ ಸಂಪುಟದಲ್ಲಿ ಅನುಮತಿ ನೀಡಲಾಗಿದೆ. ಅರ್ಹತಾ ಮಾನದಂಡ, ಮೀಸಲಾತಿ ಮತ್ತು ರೋಸ್ಟರ್ ನಿಯಮ ಪಾಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
