30ಕ್ಕೂ ಹೆಚ್ಚು ಉಗ್ರರು ಸೇನಾ ಸಮವಸ್ತ್ರದಲ್ಲಿ ಕಾಣಿಸಿಕೊಂಡ ವಿಡಿಯೋ ಒಂದು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗುತ್ತಿದೆ. ಕಾಶ್ಮೀರದ ಅಜ್ಞಾತ ಸ್ಥಳವೊಂದರಲ್ಲಿ ಉಗ್ರರು ಪರೇಡ್ ನಡೆಸುತ್ತಿರುವ ದೃಶ್ಯಗಳು ಈ ವಿಡಿಯೋದಲ್ಲಿ ಸೆರೆಯಾಗಿವೆ.

30ಕ್ಕೂ ಹೆಚ್ಚು ಉಗ್ರರು ಸೇನಾ ಸಮವಸ್ತ್ರದಲ್ಲಿ ಕಾಣಿಸಿಕೊಂಡ ವಿಡಿಯೋ ಒಂದು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗುತ್ತಿದೆ. ಕಾಶ್ಮೀರದ ಅಜ್ಞಾತ ಸ್ಥಳವೊಂದರಲ್ಲಿ ಉಗ್ರರು ಪರೇಡ್ ನಡೆಸುತ್ತಿರುವ ದೃಶ್ಯಗಳು ಈ ವಿಡಿಯೋದಲ್ಲಿ ಸೆರೆಯಾಗಿವೆ.

ವಿಡಿಯೋದಲ್ಲಿ ಕಂಡು ಬಂದ ದೃಶ್ಯಗಳಲ್ಲಿ ಪ್ರತಿಯೊಬ್ಬ ಉಗ್ರನೂ ಬುಲೆಟ್ ಪ್ರೂಫ್ ಜಾಕೆಟ್'ಗಳನ್ನು ಧರಿಸಿದ್ದಲ್ಲದೇ, ಶಸ್ತ್ರಾಸ್ತ್ರಗಳನ್ನು ಹೊಂದಿರುವುದು ಸದ್ಯಕ್ಕಿರುವ ಆತಂಕವಾಗಿದೆ. ಕೆಲ ದಿನಗಳ ಹಿಂದಷ್ಟೇ ಸೈನಿಕರ ಮೇಲೆ ನಡೆದ ನಕ್ಸಲ್ ದಾಳಿಯ ಕಹಿ ನೆನಪು ಮಾಸುವ ಮುನ್ನವೇ ಇಂತಹ ವಿಡಿಯೋ ಸಾಮಾಜಿಕ ಜಾಲಾತಾಣಗಳಲ್ಲಿ ಕಂಡು ಬಂದಿರುವುದು ನಿಜಕ್ಕೂ ಆಘಾತಕಾರಿ ವಿಚಾರ.