ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೆಲ್ಮೈ ಸುಳಿಗಾಗಿ ಪ್ರಭಾವದಿಂದ ಮಳೆಯ ಪ್ರಮಾಣ ಹೆಚ್ಚಲಿದೆ ಎಂದು ಹೇಳಿದೆ. 

ಬೆಂಗಳೂರು [ಆ.21]:  ರಾಜ್ಯದಲ್ಲಿ ಮುಂದಿನ ಎರಡರಿಂದ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿತ್ತು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೀಗ ಉತ್ತರ ಒಳನಾಡು ಮತ್ತು ಕರಾವಳಿ ಭಾಗಕ್ಕೆ ಮಳೆ ವ್ಯಾಪ್ತಿಸಿದ್ದು, ಎರಡು ದಿನ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗಲಿದೆ. ಆ.25 ರವರೆಗೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ 65 ರಿಂದ 115 ಮಿ.ಮೀ.ವರೆಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ದಕ್ಷಿಣ ಒಳನಾಡು ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ, ಮಲೆನಾಡು ಜಿಲ್ಲೆಗಳಾದ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮುಂದಿನ 48 ಗಂಟೆಯಲ್ಲಿ 65 ರಿಂದ 115 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.