ಬೆಂಗಳೂರು :  ಒಂದುವರೆ ತಿಂಗಳ ನಂತರ ನಗರದಲ್ಲಿ ಮಂಗಳವಾರ ತುಂತುರು ಮಳೆಯ ಸಿಂಚನವಾಗಿದೆ.

ಮುಂಗಾರು ಮುಕ್ತಾಯಗೊಳ್ಳುತ್ತಿದ್ದಂತೆ ನಗರದಲ್ಲಿ ಕಣ್ಮರೆಯಾಗಿದ್ದ ಮಳೆರಾಯ ಮತ್ತೆ ಮಂಗಳವಾರ ಪ್ರತ್ಯಕ್ಷನಾಗಿದ್ದಾನೆ. ಮುಂಗಾರು ಅವಧಿ ಪೂರ್ಣವಾದ ಬಳಿಕ ಕಳೆದ ಅಕ್ಟೋಬರ್‌ನಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ನಗರದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾಗಿದ್ದು ಬಿಟ್ಟರೆ ನಗರದಲ್ಲಿ ಮಳೆಯಾಗಿರಲಿಲ್ಲ. 

ಇದೀಗ ಬಂಗಾಳಕೊಲ್ಲಿಯಲ್ಲಿ ಹಿಂಗಾರು ಚುರುಕಾದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆ ಮಳೆಯಾಗುತ್ತಿದೆ.

ನಗರ ವಿವಿಧ ಭಾಗದಲ್ಲಿ ಸುಮಾರು 7 ಮಿ.ಮೀ. ಮಳೆಯಾದ ವರದಿಯಾಗಿದೆ. ಇನ್ನು ಎರಡು ದಿನ ನಗರದಲ್ಲಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.