ಬಾಗಲಕೋಟೆಯಲ್ಲಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಸುದ್ದಿಗೋಷ್ಠಿ ನಡೆಸಿ ಮುಂದೆಯೂ ಕೂಡ ನಾವೇ ಅಧಿಕಾರಕ್ಕೆ ಬರುತ್ತೇವೆ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದಾರೆ.

ಬಾಗಲಕೋಟೆ (ಜ.05): ಬಾಗಲಕೋಟೆಯಲ್ಲಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಸುದ್ದಿಗೋಷ್ಠಿ ನಡೆಸಿ ಮುಂದೆಯೂ ಕೂಡ ನಾವೇ ಅಧಿಕಾರಕ್ಕೆ ಬರುತ್ತೇವೆ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆದರೆ ಬಿಜೆಪಿಯವರು ಅಧಿಕಾರಕ್ಕೆ ಬರುವ ಹಗಲುಗನಸು ಕಾಣುತ್ತಿದ್ದಾರೆ. ಬಿಜೆಪಿ ಸರ್ಕಾರವಿದ್ದಾಗ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿದ್ದವು. ನಾವು ಅಧಿಕಾರಕ್ಕೆ ಬಂದ ಮೇಲೆ ಕಡಿಮೆಯಾಗಿವೆ ಎಂದು ಹೇಳಿದರು.

ಇನ್ನು ರಾಜ್ಯದಲ್ಲಿ ಪಿಎಫ್’ಐ ಸಂಘಟನೆ ನಿಷೇಧಿಸುವಂತೆ ಬಿಜೆಪಿ ಒತ್ತಾಯ ಮಾಡುತ್ತಿದೆ. ಆದರೆ ಪಿಎಫ್’ಐ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಬಿಜೆಪಿಯವರು ಅವಕಾಶವಾದಿ ರಾಜಕಾರಣ ಮಾಡುತ್ತಾರೆ. ಪಿಎಫ್ಐ ಸೇರಿದಂತೆ ಯಾವುದೇ ಸಂಘಟನೆಗಳನ್ನು ಸದ್ಯ ಬ್ಯಾನ್ ಮಾಡುವುದಿಲ್ಲ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಪ್ರವಾಸದಿಂದ ಮರಳಿದ ಮೇಲೆ ಚರ್ಚಿಸಲಾಗುವುದು ಎಂದರು.