ಸಿಬಿಐನ ವಿಶೇಷ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ರಾಕೇಶ್ ಆಸ್ತಾನ ಅವರನ್ನು ನೇಮಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸರ್ಕಾರೇತರ ಸಂಸ್ಥೆಯೊಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ನವದೆಹಲಿ: ಸಿಬಿಐನ ವಿಶೇಷ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ರಾಕೇಶ್ ಆಸ್ತಾನ ಅವರನ್ನು ನೇಮಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸರ್ಕಾರೇತರ ಸಂಸ್ಥೆಯೊಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿಬಿಐನ ವಿಶೇಷ ನಿರ್ದೇಶಕ ಹುದ್ದೆಗೆ ರಾಕೇಶ್ ಆಸ್ತಾನ ಹೆಸರನ್ನು ಕಳೆದ ಅ.26ರಂದು ಕೇಂದ್ರ ಜಾಗೃತಿ ಆಯುಕ್ತ ಕೆ.ವಿ. ಚೌಧರಿ ನೇತೃತ್ವದ ಸಮಿತಿಯು ಸರ್ವಾನುಮತದಿಂದ ಅಂತಿಮಗೊಳಿಸಿತ್ತು.

ಕಾಮನ್ ಕಾಸ್ ಎಂಬ ಸರ್ಕಾರೇತರ ಸಂಸ್ಥೆಯು ಸುಪ್ರೀಂ ಕೋರ್ಟಿನಲ್ಲಿ ಅರ್ಜಿಯನ್ನು ಸಲ್ಲಿಸಿದ್ದು, ಆಸ್ತಾನ ಅವರ ನೇಮಕವನ್ನು ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಕೂಡಾ ವಿರೋಧಿಸಿದ್ದಾರೆ ಎಂದು ಹೇಳಲಾಗಿದೆ.

ತನಿಖೆಯ ಹಂತದಲ್ಲಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಆಸ್ತಾನ ಹೆಸರು ಕೇಳಿಬಂದಿದೆ ಎಂದು ವರ್ಮಾ ಹೇಳಿದ್ದರು ಎಂದು ಅರ್ಜಿಯಲ್ಲಿ ಹೇಳಲಾಗಿದೆ.