ಉಗ್ರರಿಗೆ ಆರ್ಥಿಕ ನೆರವು: ಕಾಶ್ಮೀರದ ಮಾಜಿ ಶಾಸಕ ಬಂಧನ!
ಉಗ್ರರಿಗೆ ಆರ್ಥಿಕ ನೆರವು: ಕಾಶ್ಮೀರದ ಮಾಜಿ ಶಾಸಕ ರಶೀದ್ ಬಂಧಿಸಿದ ಎನ್‌ಐಎ| ನ್ಯಾಯಾಲಯ ಆತನನ್ನು 4 ದಿನಗಳ ಕಾಲ ಎನ್‌ಐಎ ವಶಕ್ಕೆ ಒಪ್ಪಿಸಿದೆ
ನವದೆಹಲಿ[ಆ.11]: ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡಿದ ಆರೋಪ ಪ್ರಕರಣದಲ್ಲಿ ಜಮ್ಮು- ಕಾಶ್ಮೀರದ ಮಾಜಿ ಶಾಸಕ ರಶೀದ್ ಎಂಜಿನಿಯರ್‌ರನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಶನಿವಾರ ಬಂಧಿಸಿದೆ.
ಬಳಿಕ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಈ ವೇಳೆ ನ್ಯಾಯಾಲಯ ಆತನನ್ನು 4 ದಿನಗಳ ಕಾಲ ಎನ್‌ಐಎ ವಶಕ್ಕೆ ಒಪ್ಪಿಸಿದೆ.
ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ರಶೀದ್‌ನನ್ನು ಭಯೋತ್ಪಾದನಾ ನಿಗ್ರಹ ದಳ ತನಿಖೆ ನಡೆಸುತ್ತಿತ್ತು. ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕತಾವಾದಿಗಳಾದ ಶಬ್ಬೀರ್ ಶಾ, ಮಸ್ರತ್ ಅಲಾಂ, ಆಸಿಯಾ ಅಂದ್ರಾಬಿ ಈಗಾಗಲೇ ಬಂಧಿಸಲ್ಪಟ್ಟಿದ್ದಾರೆ.