17 ವರ್ಷದ ಬಾಲಕನ ಸಾವಿಗೆ ಮೇಣದ ಬತ್ತಿ ಮೆರವಣಿಗೆ ನಡೆಸುವಾಗ ಜನರ ಗುಂಪೊಂದು ನಾಲ್ವರು ನೈಜೀರಿಯನ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಐವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ನವದೆಹಲಿ (ಮಾ.28): 17 ವರ್ಷದ ಬಾಲಕನ ಸಾವಿಗೆ ಮೇಣದ ಬತ್ತಿ ಮೆರವಣಿಗೆ ನಡೆಸುವಾಗ ಜನರ ಗುಂಪೊಂದು ನಾಲ್ವರು ನೈಜೀರಿಯನ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಐವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

“ಪೊಲೀಸರು ಐವರನ್ನು ಬಂಧಿಸಿದ್ದಾರೆ. ಅವರ ಮೇಲೆ ಎಫ್ ಐಆರ್ ದಾಖಲಿಸಲಾಗಿದ್ದು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಡಿಜಿ ದಲ್ಜಿತ್ ಚೌಧರಿ ಹೇಳಿದ್ದಾರೆ.

ಕೆಲವು ನೈಜೀರಿಯನ್ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗೆ ಒತ್ತಾಯಪೂರ್ವಕವಾಗಿ ಟ್ರಗ್ಸ್ ತೆಗೆದುಕೊಳ್ಳಲು ಒತ್ತಾಯಿಸಿದ್ದೇ ಅವನ ಸಾವಿಗೆ ಕಾರಣ ಎನ್ನುವುದು ಸ್ಥಳಿಯರ ಾರೋಪ.

ವಿದ್ಯಾರ್ಥಿಯ ಸಾವಿಗೆ ಕಾರಣರಾದ ಐವರು ನೈಜೀರಿಯನ್ ರನ್ನು ಬಂಧಿಸುವಂತೆ ಒತ್ತಾಯಿಸಿ ಅಲ್ಲಿನ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಮತ್ತು ದಾಳಿಯ ಸಂಪೂರ್ಣ ವಿಡಿಯೋ ರೆಕಾರ್ಡ್ ನಮ್ಮ ಬಳಿಯಿದೆ. ಘಟನೆ ಹಿಂದಿರುವವರ ಬಗ್ಗೆ ಶೋಧ ಕಾರ್ಯ ನಡೆಸುತ್ತಿದ್ದೇವೆ ಎಂದು ಎಸ್ ಎಸ್ಪಿ ಧರ್ಮೇಂದ್ರ ಸಿಂಗ್ ಹೇಳಿದ್ದಾರೆ.

ಏತನ್ಮಧ್ಯೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರೆ ಮಾಡಿ ಘಟನೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ.