ಮಂಡ್ಯ [ಜು.08]: ಕೆ.ಸಿ. ನಾರಾಯಣಗೌಡ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೆ ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಹೆಸರು ಕೇಳಿಬಂದಿದೆ. 

ಒಂದು ವೇಳೆ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆದರೆ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸಬೇಕು ಎಂಬ ಬಗ್ಗೆ ಜೆಡಿಎಸ್ ಕಾರ್ಯಕರ್ತರು ವಾಟ್ಸ್‌ಆ್ಯಪ್ ಗ್ರೂಪ್‌ಗಳಲ್ಲಿ ಚರ್ಚೆ ಆರಂಭಿಸಿದ್ದಾರೆ. 

ಲೋಕಸಭಾ  ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದ ನಿಖಿಲ್ ಕುಮಾರಸ್ವಾಮಿ, ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು, ಅವರೇ ಕ್ಷೇತ್ರದ ಮುಂದಿನ ಎಂಎಲ್‌ಎ ಎಂದು ಫೋಟೋಗಳನ್ನು ವೈರಲ್ ಮಾಡಿದ್ದಾರೆ.