ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿಪರಾಭವಗೊಂಡಿದ್ದ ನಿಖಿಲ್ ಕುಮಾರಸ್ವಾಮಿಗೆ ಹೊಸ ಜವಾಬ್ದಾರಿ ನೀಡಲಾಗುತ್ತಿದೆಯಾ..?
ಮಡಿಕೇರಿ (ಜೂ.13): ಮುಂದಿನ ಜೆಡಿಎಸ್ ರಾಜ್ಯಾಧ್ಯಕ್ಷರು ಯಾರು ಆಗುತ್ತಾರೆ ಎಂದು ನನಗೆ ತಿಳಿದಿಲ್ಲ. ಆದರೆ, ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಮರ್ಥರು, ಇವರೊಂದಿಗೆ ಮಧು ಬಂಗಾರಪ್ಪ, ದತ್ತ ಸೇರಿದಂತೆ ಆನೇಕರು ಆಕಾಂಕ್ಷಿಗಳಿದ್ದಾರೆ ಎಂದು ಜೆಡಿಎಸ್ ಮುಖಂಡ ಎಚ್.ವಿಶ್ವನಾಥ್ ತಿಳಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಗ್ಗೆ ತನಗೆ ಯಾವುದೇ ಅಸಮಾಧಾನ ಇಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆಯೇ ಹೊರತು ಜೆಡಿಎಸ್ ಪಕ್ಷಕ್ಕಲ್ಲ. ಪಕ್ಷದ ಸಿದ್ಧಾಂತದಡಿ ಕೆಲಸ ಮಾಡುತ್ತೇನೆ. ತನ್ನ ರಾಜೀನಾಮೆಯನ್ನು ಅಂಗೀಕರಿಸುವಂತೆ ಮನವೊಲಿಸಿದ್ದೇನೆ. ಆದರೆ ಅವರು ಅಂಗೀಕಾರ ಮಾಡಿಲ್ಲ. ರಾಜೀನಾಮೆ ಸಲ್ಲಿಸಿದ ನಂತರ ಕುಮಾರಸ್ವಾಮಿ ಹಾಗೂ ದೇವೇಗೌಡರು ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಜೆಡಿಎಸ್ ಕೋಟಾದಲ್ಲಿ 2 ಸ್ಥಾನಗಳು ಮಂತ್ರಿ ಮಂಡಲಕ್ಕೆ ಸೇರಿಸಲು ಬಾಕಿ ಇದೆ. ಅದರಲ್ಲಿ ದಲಿತ ಮತ್ತು ಅಲ್ಪಸಂಖ್ಯಾತರಿಗೆ ಸ್ಥಾನ ನೀಡಬೇಕು ಎಂದರು.
