Asianet Suvarna News Asianet Suvarna News

ನಿಫಾ : ಆರೋಗ್ಯ ಇಲಾಖೆಯಿಂದ ರಾಜ್ಯದಲ್ಲಿ ಹೈ ಅಲರ್ಟ್

ಕೇರಳದಲ್ಲಿ ಮಹಾಮಾರಿ ನಿಫಾ ವೈರಸ್ ಪತ್ತೆಯಾಗಿದ್ದು ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿಯೂ ಕೂಡ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. 

Nipah outbreaks in Kerala high Alert in Karnataka
Author
Bengaluru, First Published Jun 6, 2019, 3:57 PM IST

ಬೆಂಗಳೂರು :   ಕೇರಳದಲ್ಲಿ ‌ನಿಫಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ  ಕರ್ನಾಟಕದಲ್ಲಿ ತೀವ್ರ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಕೇರಳದಲ್ಲಿ ಕಳೆದ ವರ್ಷ 17 ಮಂದಿ ನಿಫಾ ವೈರಸ್ ಗೆ ಬಲಿಯಾಗಿದ್ದು, ಈ ಬಾರಿ 5 ಮಂದಿಯಲ್ಲಿ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ. 

ಕೇರಳಕ್ಕೆ ಹೋಗುವ ಜನರನ್ನ ಆದಷ್ಟು ತಡೆಯುವುದು ಹಾಗೂ ಕೇರಳದಿಂದ ಆಗಮಿಸುವವರ ಬಗ್ಗೆ ತೀವ್ರ ನಿಗಾ ವಹಿಸಲು ಸೂಚನೆ ನೀಡಲಾಗಿದೆ.  ಬಾವಲಿ ತಿಂದು ಬಿಟ್ಟ ಹಣ್ಣಿನ ಸೇವನೆ ಮಾಡುವ ಮುನ್ನ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. 

ಕೇರಳದ ಗಡಿ ಪ್ರದೇಶಗಳಲ್ಲಿಯೂ ಕೂಡ ಕಟ್ಟೆಚ್ಚರ ವಹಿಸುವಂತೆ ಆದೇಶಿಸಿದ್ದು, ಈ ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ. ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ನಿಫಾ ಬಗ್ಗೆ ನಿಗಾ ಇಡುವಂತೆ ಸರ್ಕಾರಿ ಆಸ್ಪತ್ರೆಗಳಿಗೂ ತಿಳಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಉಪ ನಿರ್ದೇಶಕ ಡಾ.ಬಿ.ಜಿ.ಪ್ರಕಾಶ್ ಕುಮಾರ್ ಹೇಳಿದರು.

Follow Us:
Download App:
  • android
  • ios