ಸಾವಿರಾರು ಕೋಟಿ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾದ ವಜ್ರ ಉದ್ಯಮಿ ನೀರವ್ ಮೋದಿಗೆ ಸಂಬಂಧಿಸಿದಂತೆ ಬ್ರಿಟನ್ ಸರ್ಕಾರವು ಮಹತ್ವಪೂರ್ಣ ಮಾಹಿತಿಯೊಂದನ್ನು ನೀಡಿದೆ.
ನವದೆಹಲಿ[ಡಿ.29]: ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ಸಾವಿರಾರು ಕೋಟಿ ರು. ವಂಚಿಸಿ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ, ತಮ್ಮ ದೇಶದಲ್ಲಿದ್ದಾನೆ ಎಂದು ಬ್ರಿಟನ್ ಅಧಿಕಾರಿಗಳು ಭಾರತಕ್ಕೆ ಮಾಹಿತಿ ನೀಡಿದ್ದಾರೆ.
ಮ್ಯಾಂಚೆಸ್ಟರ್‌ನಲ್ಲಿರುವ ನ್ಯಾಷನಲ್ ಸೆಂಟ್ರಲ್ ಬ್ಯೂರೋದ ಅಧಿಕಾರಿಗಳು, ಭಾರತದ ತನಿಖಾ ಸಂಸ್ಥೆಗಳಿಗೆ ಈ ಮಾಹಿತಿಯನ್ನು ನೀಡಿದ್ದಾರೆ ಎಂದು ವಿದೇಶಾಂಗ ಖಾತೆ ರಾಜ್ಯ ಸಚಿವ ವಿ.ಕೆ.ಸಿಂಗ್, ಸಂಸತ್ತಿಗೆ ಮಾಹಿತಿ ನೀಡಿದ್ದಾರೆ.
ಈ ಹಿಂದೆ ನೀರವ್ ಮೋದಿ, ಬ್ರಿಟನ್‌ನಿಂದ ಬೇರೊಂದು ದೇಶಕ್ಕೆ ಪರಾರಿಯಾಗಿದ್ದಾನೆ ಎಂದು ವರದಿಯಾಗಿತ್ತು.
