ಜೆಡಿಯು ಹಾಗೂ ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಯಾವುದೇ ಅಸಮಾಧಾನ ಎಲ್ಲ. ಎನ್‌ಡಿಎ ಜೊತೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಚುಣಾವಣೆಯ ಸಂದರ್ಭದಲ್ಲಿ ಚರ್ಚೆ ನಡೆಸಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹೇಳಿದ್ದಾರೆ.  

ಪಟನಾ: ಜೆಡಿಯು ಹಾಗೂ ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಯಾವುದೇ ಅಸಮಾಧಾನ ಎಲ್ಲ. ಎನ್‌ಡಿಎ ಜೊತೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಚುಣಾವಣೆಯ ಸಂದರ್ಭದಲ್ಲಿ ಚರ್ಚೆ ನಡೆಸಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೆಲ್ಲ ಒಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಸರ್ಕಾರದಲ್ಲಿ ಯಾವುದೇ ಅಸಮಾಧಾನ ಇಲ್ಲ. ಆದರೆ, ಕೆಲವು ರಾಜಕೀಯ ಮುಖಂಡರು ಮಾಧ್ಯಮಗಳ ಮುಂದೆ ಹೇಳಿಕೆ ನೀಡುವ ಮೂಲಕ ಪ್ರಚಾರಗಿಟ್ಟಿಸುತ್ತಿದ್ದಾರೆ ಎಂದು ಹೇಳಿದರು. 

ಇದೇ ವೇಳೆ ತಮ್ಮ ಪಕ್ಷ ಲೋಕಸಭೆಯಲ್ಲಿ 40 ಸ್ಥಾನಗಳ ಪೈಕಿ 25 ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ ಎಂಬ ವರದಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.