ಬಾಲಿವುಡ್ ಸಿನಿಮಾ 'ಪದ್ಮಾವತಿ' ಚಿತ್ರತಂಡದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಬೆದರಿಕೆ ಒಡ್ಡುತ್ತಿರುವ ಮುಖ್ಯಮಂತ್ರಿಗಳು, ಸಚಿವರುಗಳು ಹಾಗೂ ಹಲವು ರಾಜಕೀಯ ಮುಖಂಡರ ವಿರುದ್ಧ ಒಂದೆಡೆ ಸುಪ್ರೀಂ ಕೋರ್ಟ್ ಗರಂ ಆಗಿದ್ದರೆ, ಇನ್ನೊಂದೆಡೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ‘ಪದ್ಮಾವತಿ ಬೇಡ’ ಎಂಬ ರಾಗ ಹಾಡಿದ್ದಾರೆ.

ನವದೆಹಲಿ: ಬಾಲಿವುಡ್ ಸಿನಿಮಾ 'ಪದ್ಮಾವತಿ' ಚಿತ್ರತಂಡದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಬೆದರಿಕೆ ಒಡ್ಡುತ್ತಿರುವ ಮುಖ್ಯಮಂತ್ರಿಗಳು, ಸಚಿವರುಗಳು ಹಾಗೂ ಹಲವು ರಾಜಕೀಯ ಮುಖಂಡರ ವಿರುದ್ಧ ಒಂದೆಡೆ ಸುಪ್ರೀಂ ಕೋರ್ಟ್ ಗರಂ ಆಗಿದ್ದರೆ, ಇನ್ನೊಂದೆಡೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ‘ಪದ್ಮಾವತಿ ಬೇಡ’ ಎಂಬ ರಾಗ ಹಾಡಿದ್ದಾರೆ.

ವಿವಾದಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸುವವರೆಗೆ ಬಿಹಾರದಲ್ಲಿ ಪದ್ಮಾವತಿ ಪ್ರದರ್ಶನಕ್ಕೆ ಅವಕಾಶ ನೀಡ;ಲಾಗದು ಎಂದು ಹೇಳಿದ್ದಾರೆ.

ಪದ್ಮಾವತಿಗೆ ವಿರೋಧ ವ್ಯಕ್ತಪಡಿಸಿದ 5ನೇ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಗಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳು ಪ್ರದರ್ಶನಕ್ಕೆ ಅವಕಾಶವನ್ನು ನಿರಾಕರಿಸಿವೆ. ಈ ಮುಂಚೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಗುಜರಾತ್ ಸಿಎಂ ವಿಜಯ್ ರೂಪಾನಿ, ರಾಜಸ್ಥಾನ ಸಿಎಂ ವಸುಂಧರಾ ರಾಜೇ ಹಾಗೂ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಪದ್ಮಾವತಿಯನ್ನು ವಿರೋಧಿಸಿದ್ದರು.