ಇತ್ತೀಚಿನ ಕೆಲವು ದಿನಗಳಿಂದ ಬಿಹಾರದಲ್ಲಿ ಸಮ್ಮಿಶ್ರ ಪಕ್ಷಗಳಾದ ಜೆಡಿಯು ಹಾಗೂ ಆರ್'ಜೆಡಿ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು.

ಪಾಟ್ನಾ(ಜು.26): ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ

ಜೆಡಿಯು ಶಾಸಕರ ಜೊತೆಯಲ್ಲಿ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರನ್ನು ಭೇಟಿ ಮಾಡಿದ ನಂತರ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತೀಚಿನ ಕೆಲವು ದಿನಗಳಿಂದ ಬಿಹಾರದಲ್ಲಿ ಸಮ್ಮಿಶ್ರ ಪಕ್ಷಗಳಾದ ಜೆಡಿಯು ಹಾಗೂ ಆರ್'ಜೆಡಿ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು.

ಉಪ ಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ನಿವಾಸದ ಮೇಲೆ ಸಿಬಿಐ ದಾಳಿ ಮಾಡಿ ಎಫ್'ಐಆರ್ ದಾಖಲಿಸಿತ್ತು. ಅನಂತರ ತೇಜಸ್ವಿ ರಾಜೀನಾಮೆ ನೀಡಬೇಕೆಂದು ಮಿತ್ರ ಪಕ್ಷ ಜೆಡಿಯು ಪಟ್ಟು ಹಿಡಿದಿತ್ತು. ಆರ್'ಜೆಡಿ ಮೈತ್ರಿಯಿಂದ ಹೊರ ಬಂದಿರುವ ನಿತೀಶ್ ಕುಮಾರ್ ಬಿಜೆಪಿ ಜೊತೆ ಕೈಜೋಡಿಸಿ ಮತ್ತೆ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ.