ಪಟನಾ[ಸೆ.21]: ಜೆಡಿಯು ಮತ್ತು ಬಿಜೆಪಿ ಭಾಗವಾಗಿರುವ ಎನ್‌ಡಿಎ ಮೈತ್ರಿಕೂಟದಲ್ಲಿ ಬಿರುಕು ಉಂಟಾಗಿಲ್ಲ. ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ 200 ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಯು ಮಧ್ಯೆ ಅಂತರ ಉಂಟಾಗಿದೆ. ಇದು ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂಬ ವಿರೋಧಿಗಳ ಹೇಳಿಕೆಗೆ ನಿತೀಶ್‌ ಕುಮಾರ್‌ ತಿರುಗೇಟು ನೀಡಿದ್ದಾರೆ.

ಸರ್ಕಾರ ಮತ್ತು ನನ್ನ ವಿರುದ್ಧ ವಿಪಕ್ಷಗಳು ವೈಯಕ್ತಿಕ ಟೀಕೆ ಮಾಡುತ್ತಿದ್ದಾರೆ. ಇದಕ್ಕೆ ಪಕ್ಷದ ನಾಯಕರು ಪ್ರತಿಕ್ರಿಯಿಸಬಾರದು. ವಿಧಾನಸಭೆಯ 243 ಸ್ಥಾನಗಳಲ್ಲಿ 206 ಸ್ಥಾನಗಳಲ್ಲಿ ಮೈತ್ರಿಕೂಟ ವಿಜಯ ಸಾಧಿಸಲಿದೆ ಎಂದು ತಿಳಿಸಿದ್ದಾರೆ.