ಬಂಧನದ ಭೀತಿಯಿಂದ ನಿತ್ಯಾನಂದ ಪಾರು

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 11, Sep 2018, 1:10 PM IST
Nityananda escape from arrest warrant
Highlights

ಬಂಧನ ಭೀತಿಯಿಂದ ನಿತ್ಯಾನಂದ ಪಾರು | ನಿತ್ಯಾನಂದರನ್ನು ತಕ್ಷಣಕ್ಕೆ ಬಂಧಿಸದಂತೆ ಹೈಕೋರ್ಟ್‌ ಪೊಲೀಸರಿಗೆ ಸೂಚನೆ | ಆಶ್ರಮವಾಸಿ ಮಹಿಳೆ ಮೇಲಿನ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದಾರೆ ನಿತ್ಯಾನಂದ 

ಬೆಂಗಳೂರು (ಸೆ. 11): ಆಶ್ರಮವಾಸಿ ಮಹಿಳೆ ಮೇಲಿನ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿಯನ್ನು ತಕ್ಷಣಕ್ಕೆ ಬಂಧಿಸದಂತೆ ಹೈಕೋರ್ಟ್‌ ಪೊಲೀಸರಿಗೆ ಸೋಮವಾರ ಸೂಚಿಸಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ರಾಮನಗರದ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಹೊರಡಿಸಿರುವ ಜಾಮೀನು ರಹಿತ ಬಂಧನ ವಾರೆಂಟ್‌ ಅನ್ನು ರದ್ದುಪಡಿಸುವಂತೆ ಕೋರಿ ನಿತ್ಯಾನಂದ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ಏಕಸದಸ್ಯಪೀಠ, ಸೆ.17ರವರೆಗೆ ಸ್ವಾಮೀಜಿಯನ್ನು ಬಂಧಿಸದಂತೆ ಪೊಲೀಸರಿಗೆ ಸೂಚಿಸಿತು.

ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿಗಳು, ಅರ್ಜಿ ಕುರಿತು ಮುಂದಿನ ವಿಚಾರಣೆವರೆಗೂ ಅರ್ಜಿದಾರರನ್ನು ಬಂಧಿಸಬಾರದು ಎಂದು ಪೊಲೀಸರಿಗೆ ಸೂಚಿಸಿ ವಿಚಾರಣೆಯನ್ನು ಸೆ.17ಕ್ಕೆ ಮುಂದೂಡಿದರು.

loader