ಇದೇ ವೇಳೆ ಮಾಜಿ ಮಾಹಿತಿ ಆಯುಕ್ತ ಶಂಕರ್ ಆರ್. ಪಾಟೀಲ್ ಅವರು ಬಿಜೆಪಿಗೆ ಸೇರಲಿದ್ದಾರೆ. ಜೆಡಿಎಸ್ ಪಕ್ಷದ ಕಾರ್ಯಕರ್ತರಾಗಿದ್ದ ಸುಮಾರು 20 ವಕೀಲರು ಸಹ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರು(ಸೆ.30): ದಶಕಗಳಿಂದ ಕಾಂಗ್ರೆಸ್‌ನಲ್ಲಿದ್ದ ಮಾಜಿ ಶಾಸಕ ನೆ.ಲ. ನರೇಂದ್ರಬಾಬು ಅವರು ಭಾನುವಾರ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ.

ಮಲ್ಲೇಶ್ವರದಲ್ಲಿನ ಬಿಜೆಪಿ ಕಚೇರಿಯಲ್ಲಿ ಮಧ್ಯಾಹ್ನ 2ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ನರೇಂದ್ರಬಾಬು ಅವರನ್ನು ಬರಮಾಡಿಕೊಳ್ಳಲಿದ್ದಾರೆ. ಇದೇ ವೇಳೆ ಮಾಜಿ ಮಾಹಿತಿ ಆಯುಕ್ತ ಶಂಕರ್ ಆರ್. ಪಾಟೀಲ್ ಅವರು ಬಿಜೆಪಿಗೆ ಸೇರಲಿದ್ದಾರೆ. ಜೆಡಿಎಸ್ ಪಕ್ಷದ ಕಾರ್ಯಕರ್ತರಾಗಿದ್ದ ಸುಮಾರು 20 ವಕೀಲರು ಸಹ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ನರೇಂದ್ರಬಾಬು ಅವರನ್ನು ಪಕ್ಷಕ್ಕೆ ಕರೆತರುವ ಸಂಬಂಧ ಯಡಿಯೂರಪ್ಪ ಸೇರಿದಂತೆ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಮತ್ತು ಸ್ಥಳೀಯ ನಾಯಕರು ಚರ್ಚೆ ನಡೆಸಿದ್ದರು. ಮಾತುಕತೆ ಫಲಪ್ರದವಾದ ಹಿನ್ನೆಲೆಯಲ್ಲಿ ನರೇಂದ್ರಬಾಬು ಬಿಜೆಪಿಗೆ ಸೇರುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ನರೇಂದ್ರಬಾಬು ಅವರಿಗೆ ಬಿಜೆಪಿ ಸೇರ್ಪಡೆ ಬಳಿಕ ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡದಿರುವ ಬಗ್ಗೆ ಸ್ಪಷ್ಟವಾಗಿ ತಿಳಿಸಲಾಗಿದೆ. ನರೇಂದ್ರಬಾಬು ಅವರು ಸಹ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಬಿಜೆಪಿ ಸೇರಿದ ತರುವಾಯ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರಕುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.