ರಾಜ್ಯದಲ್ಲಿರುವ ಸರ್ಕಾರ ಅಸ್ಥಿರಗೊಳಿಸಲು ಯತ್ನ ನಡೆಯುತ್ತಿದೆ ಎನ್ನುವ ಬಗ್ಗೆ ತಾವು ಯಾರನ್ನೂ ಕೂಡ ದೂರುವುದಿಲ್ಲ ಎಂದು ಜೆಡಿಎಸ್ ಹಿರಿಯ ನಾಯಕ ಎಚ್ ಡಿ ದೇವೇಗೌಡ ಅವರು ಹೇಳಿದ್ದಾರೆ.
ಹಾಸನ: ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರ ಗೊಳಿಸಲು ಬಿಜೆಪಿ ಯತ್ನಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿ ದಂತೆ ನಾನು ಯಾರನ್ನೂ ದೂಷಿಸಲು ಹೋಗುವು ದಿಲ್ಲ.
ಒಬ್ಬೊಬ್ಬರು ಒಂದೊಂದು ರೀತಿ ಚಿತ್ರ- ವಿಚಿತ್ರ ಹೇಳಿಕೆ ನೀಡುತ್ತಿ ದ್ದಾರೆ. ಅದಕ್ಕೆ ಪ್ರತಿಕ್ರಿಯಿಸುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಸರ್ಕಾರವನ್ನು ಅತಂತ್ರ ಸ್ಥಿತಿಗೆ ದೂಡುವ ವಿಚಾರದಲ್ಲಿ ಹೆಚ್ಚಿನ ಪ್ರಚಾರ ನೀಡುತ್ತಿರುವ ಮಾಧ್ಯಮಗಳನ್ನೂ ದೂಷಿಸುವುದಿಲ್ಲ ಎಂದು ಹೊಳೆನರಸೀಪುರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ದೇವೇಗೌಡರ ಕುಟುಂಬದ ಒಡ್ಡೋ ಲಗ ಮಾತ್ರ ಪ್ರಧಾನಿ ಅವರನ್ನು ಭೇಟಿ ಮಾಡಿದೆ ಎಂಬ ರಾಜ್ಯ ಬಿಜೆಪಿ ಟೀಕೆಗೆ ತಿರುಗೇಟು ನೀಡಿದ ಗೌಡರು, ನಾನು ಲೋಕಸಭಾ ಸದಸ್ಯನಾಗಿ, ಇಬ್ಬರು ಮಕ್ಕಳಲ್ಲಿ ಒಬ್ಬ ಮುಖ್ಯಮಂತ್ರಿ ಆಗಿ ಮತ್ತೊಬ್ಬ ಸಚಿವರಾಗಿ ಭೇಟಿ ಮಾಡಿದ್ದೇವೆ ಎಂದರು.
