ಯಾವುದೇ ರೀತಿ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ : ಸಿದ್ದರಾಮಯ್ಯ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 9, Aug 2018, 12:09 PM IST
No Alliance With JDS In Local Body Election
Highlights

ಸ್ಥಳೀಯ ಸಂಸ್ಥೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು ಈ ಸಂದರ್ಭದಲ್ಲಿ ಯಾವುದೇ ರೀತಿಯ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಹುಬ್ಬಳ್ಳಿ:  ಸ್ಥಳೀಯ ಸಂಸ್ಥೆಗಳಿಗೆ ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದ್ದು, ಇದಕ್ಕೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.   

ತಮ್ಮ ಸ್ವ ಕ್ಷೇತ್ರ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಆಯೋಜನೆ  ಮಾಡಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ತೆರಳುವ ಮುನ್ನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ಈ ವಿಚಾರ ತಿಳಿಸಿದರು. 

ಮೈತ್ರಿ ವಿಚಾರ ಜಿಲ್ಲಾ ಮಟ್ಟದ ನಾಯಕರಿಗೆ ಬಿಟ್ಟಿದ್ದು.  ಲೋಕಸಭೆ ಮೈತ್ರಿ ವಿಚಾರ ಸಮನ್ವಯ ಸಮಿತಿ ಸಭೆಯಲ್ಲಿ ತೀರ್ಮಾನವಾಗುತ್ತದೆ.  ಸ್ಥಳೀಯವಾಗಿ ಏನೇನು ಮತ್ತು ಯಾವ ಯಾವ ರೀತಿಯ ಹೊಂದಾಣಿಕೆ ಮಾಡಿಕೊಂಡರೇ ಸುಲಭ ಮತ್ತು ಪಕ್ಷಕ್ಕೆ ಅನುಕೂಲವಾಗುತ್ತದೆ ಎಂಬ ಕುರಿತು ಜಿಲ್ಲಾ ಮಟ್ಟದ ನಾಯಕರಿಗೆ ಜವಾಬ್ದಾರಿ ವಹಿಸಿಕೊಡಲಾಗಿದೆ ಎಂದರು.

ಲೋಕಸಭಾ ಚುನಾವಣೆ ಮೈತ್ರಿ ಕುರಿತು ಮಾತನಾಡಿದ ಅವರು, ಬಹುತೇಕ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಾಗುತ್ತದೆ ಎಂದರು.  ಸದ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ಸಮನ್ವಯತೆಯಿಂದ ನಡೆಯಬೇಕಿದ್ದು,‌ ಕೆಲವೊಂದು ಹೊಂದಾಣಿಕೆ ಅನಿವಾರ್ಯ ಎಂದು ಸಿದ್ದರಾಮಯ್ಯ ಹೇಳಿದರು. 

loader