ದೇವೇಗೌಡರಿಂದ ಬಂದ ಆಫರ್ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ

First Published 27, Mar 2018, 12:01 PM IST
No alliance With JDS Saya Parameshwar
Highlights

ಜೆಡಿಎಸ್’ನೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಚುನಾವಣಾ ಪೂರ್ವ ಮೈತ್ರಿಗೆ ಸಿಎಂ ನಿರಾಕರಿಸಿದ್ದಾರೆ.

ಬೆಂಗಳೂರು : ಜೆಡಿಎಸ್’ನೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಚುನಾವಣಾ ಪೂರ್ವ ಮೈತ್ರಿಗೆ ಸಿಎಂ ನಿರಾಕರಿಸಿದ್ದಾರೆ.

ಇನ್ನು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರು  ದೇವೇಗೌಡರ ಚುನಾವಣಾ ಪೂರ್ವ ಮೈತ್ರಿ ಆಫರ್’ನ್ನು ತಿರಸ್ಕರಿಸಿದ್ದಾರೆ.  ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್’ಗೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯತೆ ಇಲ್ಲ.  

ಈ ರೀತಿಯ ವಿಚಾರಗಳು  ಹೈ ಕಮಾಂಡ್ ಮಟ್ಟದಲ್ಲಿ ತೀರ್ಮಾನ ಆಗಬೇಕು. ಆದರೆ ನನಗೆ ಅನಿಸುವ ಪ್ರಕಾರ ಕಾಂಗ್ರೆಸ್’ಗೆ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವ ಅಗತ್ಯತೆ ಇಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಸಮರ್ಥವಾಗಿದೆ. ಜೆಡಿಎಸ್’ನೊಂದಿಗೆ  ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಅನಿವಾರ್ಯತೆ ಇಲ್ಲ ಎಂದು ಅವರು ಹೇಳಿದ್ದಾರೆ.

loader