ಹುಬ್ಬಳ್ಳಿ (ಜು.06): ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡವಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಬಸವರಾಜ್ ಹೊರಟ್ಟಿ ಹೇಳಿದರು.

ಉಭಯಪಕ್ಷದ ಶಾಸಕರು ತಾವೇ ಕಚ್ಚಾಡಿಕೊಂಡು ರಾಜೀನಾಮೆ ಬೆದರಿಕೆ ಹಾಕುತ್ತಿದ್ದಾರೆ. ಜೆಡಿಎಸ್ ಶಾಸಕರು ರಾಜೀನಾಮೆಗೆ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ. ಇದಕ್ಕೆಲ್ಲ ಸಮನ್ವಯ ಸಮಿತಿ ತಪ್ಪುಗಳೇ ಕಾರಣ, ಎಂದು ಹೊರಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ | ರಾಜೀನಾಮೆ ನೀಡಲು ಬಂದ ಎರಡನೇ ಟೀಂ: ಆರ್. ಅಶೋಕ್ ಫುಲ್ ಆ್ಯಕ್ಟಿವ್!

ಯಾವೊಬ್ಬ ನಾಯಕರೂ ಜವಾಬ್ದಾರಿಯಿಂದ ಅತೃಪ್ತ ಶಾಸಕರ ಮನವೊಲಿಸಲಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಯಾರಿಗೂ ಮರು ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿಲ್ಲ. ಎಲ್ಲಾ ಅತೃಪ್ತರನ್ನು ಮಂತ್ರಿ ಮಾಡಲು ಆಗಲ್ಲ. ಬಿಜೆಪಿಯವರು ಸರ್ಕಾರ ರಚನೆಗೆ ಮುಂದಾಗದೇ ಇರುವುದೇ ಒಳಿತು, ಎಂದು ಅವರು ಹೇಳಿದರು.