ನವದೆಹಲಿ. (ಸೆ.25): ರಾಣೆಬೆನ್ನೂರು ಕ್ಷೇತ್ರದ ಪಕ್ಷೇತರ ಶಾಸಕ ಆರ್. ಶಂಕರ್ ಕೂಡ ಅನರ್ಹಗೊಂಡಿದ್ದು, ಅವರ ಕ್ಷೇತ್ರಕ್ಕೂ ಉಪ ಚುನಾವಣೆ ನಿಗದಿಯಾಗಿದೆ. ಆದರೆ, ತಮ್ಮ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುವುದಿಲ್ಲ ಎಂದು ಅನರ್ಹಗೊಂಡಿರುವ ರಾಣೇಬೆನ್ನೂರು ಅನರ್ಹ ಶಾಸಕ ಆರ್. ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅತ್ತ ಬೈ ಎಲೆಕ್ಷನ್ ತಡೆ ಹಿಡಿಯುವಂತೆ ಮನವಿ: ಇತ್ತ ಉಪಚುನಾವಣೆ ನಡೆಸುವಂತೆ ಅನರ್ಹ ಶಾಸಕನ ಪಟ್ಟು

ಇಂದು (ಬುಧವಾರ) ನವದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರಿತಿಕ್ರಿಯಿಸಿರುವ  ಶಂಕರ್,  ಕೆಪಿಜೆಪಿ ಪಕ್ಷವನ್ನು ಕಾಂಗ್ರೆಸ್ ನಲ್ಲಿ ವಿಲೀನ ಮಾಡಿಲ್ಲ. ಉಪ ಚುನಾವಣೆಗೆ ತಡೆ ನೀಡುವಂತೆ ನನ್ನ ಪರ ವಕೀಲರು ಪ್ರತ್ಯೇಕ ಅರ್ಜಿ ಸಲ್ಲಿಸಿ ವಾದ ಮಂಡಿಸಲಿದ್ದಾರೆ. ಕೆಪಿಜೆಪಿಯನ್ನು ಕಾಂಗ್ರೆಸ್ ನಲ್ಲಿ ವಿಲೀನ ಮಾಡದಿದ್ದರೂ ಸ್ಪೀಕರ್ ಅನರ್ಹ ಮಾಡಿದ್ದಾರೆ. ಇದನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಲಾಗಿದೆ ಎಂದು ಹೇಳಿದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಆರ್‌.ಶಂಕರ್ ಅವರು ಕೆಪಿಜೆಪಿಯಿಂದ ಮಾಜಿ ಸ್ಪೀಕರ್ ಕೋಳಿವಾಡ ಅವರ ವಿರುದ್ಧ ಗೆದ್ದು ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದರು. ಬಳಿಕ ಬದಲಾದ ರಾಜಕೀಯದಲ್ಲಿ ಅವರು ಕಾಂಗ್ರೆಸ್‌ಗೆ ಸೇರಿದ್ದರು. ಆದ್ರೆ, ಇದೀಗ ಕೆಪಿಜೆಪಿಯನ್ನು ಕಾಂಗ್ರೆಸ್‌ನಲ್ಲಿ ವಿಲೀನಗೊಳಿಸಿಲ್ಲ ಎಂದು ಹೇಳಿರುವುದು ರಾಜ್ಯ ರಾಜಕಾರಣಲ್ಲಿ ಸಂಚಲ ಮೂಡಿಸಿದೆ.

15 ಅನರ್ಹ ಶಾಸಕರ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ನಿಗದಿಯಾಗಿದೆ. ಅನರ್ಹತೆ ಅರ್ಜಿ ವಿಚಾರಣೆ ಮುಗಿಯುವವರೆಗೆ ಉಪ ಚುನಾವಣೆಯನ್ನು ಮುಂದೂಡಬೇಕು ಇಲ್ಲವೇ ಸ್ಪರ್ಧೆಗೆ ಅವಕಾಶ ನೀಡಬೇಕೆಂದು ಅನರ್ಹ ಶಾಸಕರು ಮನವಿ ಮಾಡಿದ್ದು, ಈ ಬಗ್ಗೆ ಇಂದು (ಬುಧವಾರ) ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಲಿದೆ.

ಇನ್ನು   ಆರ್.ಆರ್. ನಗರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯನ್ನು ತಡೆಹಿಡಿಯಲಾಗಿದ್ದು, ಈ  ಬಗ್ಗೆ  ಬುಧವಾರ ಕಾಂಗ್ರೆಸ್ ಅನರ್ಹ ಶಾಸಕ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದ್ದಾರೆ. 15 ಕ್ಷೇತ್ರಗಳ ಜೊತೆಗೆ ಆರ್.ಆರ್. ನಗರ ಕ್ಷೇತ್ರದ ಉಪಚುನಾವಣೆಯನ್ನು ನಡೆಸಬೇಕೆಂದು ಕೋರ್ಟ್ ಗೆ ಮನವಿ ಮಾಡಲಿದ್ದಾರೆ.

ಒಟ್ಟಿನಲ್ಲಿ ರಾಜ್ಯದ ಜನರ ಚಿತ್ತ ಇಂದು ಸುಪ್ರೀಂ ಕೋರ್ಟ್‌ನತ್ತ ನೆಟ್ಟಿದ್ದು, ಅನರ್ಹ ಭವಿಷ್ಯ ಏನಾಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳು
1) ಚಿಕ್ಕಬಳ್ಳಾಪುರ 2) ಮಹಾಲಕ್ಷ್ಮಿ ಲೇಔಟ್ 3) ಹೊಸಕೋಟೆ 4) ಹುಣಸೂರು 5) ಗೋಕಾಕ 6) ಯಶವಂತಪುರ 7) ಅಥಣಿ 8) ಕಾಗವಾಡ 9) ಶಿವಾಜಿನಗರ 10) ಕೆ.ಆರ್.ಪೇಟೆ 11) ಕೆ.ಆರ್.ಪುರಂ 12) ಹಿರೇಕೆರೂರು 13) ರಾಣೆಬೆನ್ನೂರು 14) ವಿಜಯನಗರ 15) ಯಲ್ಲಾಪುರ.

ಮಹತ್ವದ ದಿನಾಂಕಗಳು
ನಾಮಪತ್ರ ಸಲ್ಲಿಕೆ ಅಧಿಸೂಚನೆ - ಸೆಪ್ಟೆಂಬರ್ 23
ನಾಮಪತ್ರ ಸಲ್ಲಿಕೆ ಅಂತ್ಯ - ಸೆಪ್ಟೆಂಬರ್ 30
ನಾಮಪತ್ರ ಪರಿಶೀಲನೆ - ಅಕ್ಟೋಬರ್ 1
ನಾಮಪತ್ರ ವಾಪಸ್: ಅಕ್ಟೋಬರ್.3
ಮತದಾನ ಅಕ್ಟೋಬರ್ 21
ಫಲಿತಾಂಶ ಅಕ್ಟೋಬರ್ 24