ನವದೆಹಲಿ (ಸೆ.20): ಕಾವೇರಿ ನದಿ ನೀರು ಹಂಚಿಕೆ ಕುರಿತು ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರಗಳ ವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್ ಕರ್ನಾಟಕದ ವಾದಕ್ಕೆ ಮನ್ನಣೆ ನಿಡದೇ ದಿನಕ್ಕೆ 6 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಕರ್ನಾಟಕಕ್ಕೆ ಸೂಚಿಸಿದೆ. ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಕರ್ನಾಟಕಕ್ಕೆ ಮತ್ತೆ ಹಿನ್ನೆಡೆಯಾಗಿದೆ. ಕರ್ನಾಟಕ ಪರ ವಕೀಲ ಫಾಲಿ ನಾರಿಮನ್ ಕರ್ನಾಟಕ ಸ್ತಿತಿಗತಿ, ವಿಸ್ತೃತ ವಿವರಣೆ. ಅಂಕಿ-ಅಂಶ ಸಮೇತ ಮಾಹಿತಿಯನ್ನು ನ್ಯಾಯಾಲಯದ ಮುಂದಿಟ್ಟರೂ ಅದನ್ನ ನ್ಯಾಯಾಲಯ ಪರಿಗಣಿಸಲಿಲ್ಲ. ತಾತ್ಕಾಲಿಕ ಆದೇಶ ನೀಡಬಾರದೆಂಬ ಮನವಿಗೂ ಕಿವಿಗೊಡಲಿಲ್ಲ. ಮುಂದಿನ ವಿಚಾರಣೆಯನ್ನು ಸೆ.28ಕ್ಕೆ ಮುಂದೂಡಿದೆ. ಸೆ.21 ರಿಂದ 27ರವರೆಗೆ 6 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಕರ್ನಾಟಕಕ್ಕೆ ಸೂಚಿಸಿದೆ.
ನ್ಯಾ. ದೀಪಕ್ ಮಿಶ್ರಾ ಹಾಗೂ ನ್ಯಾ. ಲಲಿತ್ ಉದಯ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ಆದೇಶಿಸಿದೆ. ನಾಲ್ಕು ವಾರಗಳೊಳಗೆ ಮಂಡಳಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
