ಶಿಕ್ಷಕರನ್ನು ಮತದಾರರ ಪಟ್ಟಿಯ ಪರಿಷ್ಕರಣಾ ಕಾರ್ಯಗಳಿಗೆ ನಿಯೋಜಿಸುವ ವೇಳೆ ಷರತ್ತುಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ರಾಜ್ಯದ ಎಲ್ಲ ಉಪ ನಿರ್ದೇಶಕರಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರು (ಡಿ.25): ಶಿಕ್ಷಕರನ್ನು ಮತದಾರರ ಪಟ್ಟಿಯ ಪರಿಷ್ಕರಣಾ ಕಾರ್ಯಗಳಿಗೆ ನಿಯೋಜಿಸುವ ವೇಳೆ ಷರತ್ತುಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ರಾಜ್ಯದ ಎಲ್ಲ ಉಪ ನಿರ್ದೇಶಕರಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಏಕ ಶಿಕ್ಷಕರಿರುವ ಶಾಲೆಗಳಲ್ಲಿನ ಶಿಕ್ಷಕರನ್ನು ನಿಯೋಜಿಸುವಂತಿಲ್ಲ. ಶಿಕ್ಷಣ ಇಲಾಖೆಯ ಸಿಬ್ಬಂದಿ ಜತೆಗೆ ಬೇರೆ ಇಲಾಖೆಯ ಸಮಾನಾಂತರ ವೃಂದದ ಸಿಬ್ಬಂದಿ ನಿಯೋಜಿಸಬಹುದು. ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ಪ್ರೌಢಶಾಲೆಗಳಿಗೆ ಸಂಬಂಧಿಸಿದಂತೆ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳನ್ನು ಬೋಧಿಸುತ್ತಿರುವ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ನಿಯೋಜಿಸಬಾರದು.

ಪ್ರಾಥಮಿಕ ಶಾಲೆಗಳಿಗೆ ಸಂಬಂಧಿಸಿದಂತೆ ಶಾಲೆಯಲ್ಲಿ ನಾಲ್ಕೂ ಮತ್ತು ಅದಕ್ಕಿಂತ ಹೆಚ್ಚು ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಲ್ಲಿ ಮಾತ್ರ ಒಟ್ಟಾರೆ ನಾಲ್ಕನೇ 1 ಭಾಗದಷ್ಟು ಶಿಕ್ಷಕರನ್ನು ಈ ಕಾರ್ಯಕ್ಕೆ ನಿಯೋಜಿಸಬಹುದಾಗಿದೆ. ಅಂದರೆ, ಕಾರ್ಯ ನಿರ್ವಹಿಸುವ ಶಿಕ್ಷಕರ ವೃಂದದ ಶಾಲಾವಾರು ಶೇ.25 ಶಿಕ್ಷಕರನ್ನು ಮಾತ್ರ ನಿಯೋಜಿಸಲು ಕ್ರಮ ವಹಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.