ಮತ್ತೆ ಶುರುವಾಯ್ತಾ ಡಿ.ಕೆ. ಶಿವಕುಮಾರ್ - ರೇವಣ್ಣ ಮುನಿಸು..?

No Fight Between Revanna And  DK Shivakumar
Highlights

ಸಚಿವ ಡಿ.ಕೆ. ಶಿವಕುಮಾರ ಮತ್ತು ನಾನು ಚೆನ್ನಾಗಿದ್ದೇವೆ. ಸುಮ್ಮನೆ ನಮ್ಮ ನಡುವೆ ಜಗಳ ತಂದಿಡುವ ಕೆಲಸ ನಡೆಯುತ್ತಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದರು. 

ಬೆಂಗಳೂರು :  ಸಚಿವ ಡಿ.ಕೆ. ಶಿವಕುಮಾರ ಮತ್ತು ನಾನು ಚೆನ್ನಾಗಿದ್ದೇವೆ. ಸುಮ್ಮನೆ ನಮ್ಮ ನಡುವೆ ಜಗಳ ತಂದಿಡುವ ಕೆಲಸ ನಡೆಯುತ್ತಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದರು. 

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಡಿಕೆಶಿಗೆ ಸೇರಿದ ನೀರಾವರಿ ಇಲಾಖೆಯ ವರ್ಗಾವರ್ಗಿಯಲ್ಲಿ ರೇವಣ್ಣ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪಗಳಿಗೆ ಈ ರೀತಿ ಉತ್ತರಿಸಿದದರು. ನಮ್ಮದೇನಿದ್ದರೂ ರಸ್ತೆ ಗುಂಡಿ ಮುಚ್ಚುವುದು ಮತ್ತು ಮಳೆ ಹಾನಿಗೆ ಪರಿಹಾರ ನೀಡುವ ಕೆಲಸ ಮಾತ್ರ ಎಂದೂ ಅವರು ಲಘು ಧಾಟಿಯಲ್ಲಿ ಹೇಳಿದರು.

ನಾನು ಲೋಕೋಪಯೋಗಿ ಸಚಿವನಾಗಿ ಆ ಇಲಾಖೆ ಕೆಲಸ ಮಾತ್ರ ಮಾಡುತ್ತಿದ್ದೇನೆ. ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಕೆಲಸ ಬಿಟ್ಟು ಬೇರೇನೂ ಮಾಡಿಲ್ಲ. ನೀರಾವರಿ ಇಲಾಖೆಯಲ್ಲಿ ನಾನು ಯಾವುದೇ ರೀತಿಯ ಹಸ್ತಕ್ಷೇಪ ಮಾಡಿಲ್ಲ. ಈ ಕುರಿತು ಕಾಂಗ್ರೆಸ್ ಅಧ್ಯಕ್ಷರಿಗೆ ಬಹಿರಂಗವಾಗಿ ಹೇಳಿದ್ದೇನೆ. ಹಸ್ತಕ್ಷೇಪ ಮಾಡಿದ್ದೇನೆಂದು ಕಾಂಗ್ರೆಸ್ ಅಧ್ಯಕ್ಷರು ಕೇಳಿದರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ. ಆರ್‌ಡಿಪಿಆರ್ ಇಲಾಖೆಗೆ ಅಧಿಕಾರಿಗಳನ್ನು ನಾನು ಕೊಟ್ಟಿದ್ದೇನೆ. ಪೋಸ್ಟಿಂಗ್ ಮಾಡಿಕೊಳ್ಳುವುದು ಅವರಿಗೆ ಬಿಟ್ಟದ್ದು ಎಂದರು.

loader