ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಹೇರುವುದಿಲ್ಲ. ಪಿಯುಸಿ ಮತ್ತು ಎಸ್’ಎಸ್’ಎಲ್’ಸಿ ಪರೀಕ್ಷೆ ಬರಲಿದ್ದು, ಈ ಸಮಯದಲ್ಲಿ ಲೋಡ್ ಶೆಡ್ಡಿಂಗ್ ಹೇರುವುದಿಲ್ಲ. ಮುಂಜಾಗೃತ ಕ್ರಮವಾಗಿ ಇಲಾಖೆ ಎಲ್ಲ ರೀತಿಯತಯಾರಿ ಮಾಡಿಕೊಂಡಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು (ಡಿ.20): ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಹೇರುವುದಿಲ್ಲ. ಪಿಯುಸಿ ಮತ್ತು ಎಸ್’ಎಸ್’ಎಲ್’ಸಿ ಪರೀಕ್ಷೆ ಬರಲಿದ್ದು, ಈ ಸಮಯದಲ್ಲಿ ಲೋಡ್ ಶೆಡ್ಡಿಂಗ್ ಹೇರುವುದಿಲ್ಲ. ಮುಂಜಾಗೃತ ಕ್ರಮವಾಗಿ ಇಲಾಖೆ ಎಲ್ಲ ರೀತಿಯತಯಾರಿ ಮಾಡಿಕೊಂಡಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಖಾಸಗಿ ಹೋಟೆಲ್'ನಲ್ಲಿ ಬೆಸ್ಕಾಂ ಮಿತ್ರ ಆಪ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಶರಾವತಿಯಲ್ಲಿ ಅಗತ್ಯಕ್ಕೆ ಅನುಗುಣವಾಗುವಷ್ಟು ನೀರಿದ್ದು, ಕಲ್ಲಿದ್ದಲು ಕೇಂದ್ರಗಳ ಮೇಲೆ ಒತ್ತಡ ಹೇರುವುದಿಲ್ಲ. ಇದಲ್ಲದೆ 1 ಮಿಲಿಯನ್ ಟನ್ ಕಲ್ಲಿದ್ದಲು ಖರೀದಿಗೆ ಟೆಂಡರ್ ಕರೆಯಲಾಗಿದೆ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ನೀಡಬೇಕಾದಷ್ಟು ವಿದ್ಯುತ್ ನೀಡುತ್ತಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾಕ್ಕೆ ಪತ್ರ ಬರೆಯಲಾಗಿದೆ. ಸದ್ಯಕ್ಕೆ ವಿದ್ಯುತ್ ದರ ಏರಿಕೆ ಬಗ್ಗೆ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದರು.
ಬೆಸ್ಕಾಂ ಮಿತ್ರ ಆಪ್ ಗ್ರಾಹಕ ಸ್ನೇಹಿಯಾಗಿದ್ದು, ಈ ಮೂಲಕ ಬೆಸ್ಕಾಂ ಇನ್ನಷ್ಟು ಪಾರದರ್ಶಕತೆ ಕಂಡುಕೊಳ್ಳಲು ಸಾಧ್ಯವಾಗಲಿದೆ. ಈ ಆಪ್ ಮೂಲಕ ಗ್ರಾಹಕರು ಬಿಲ್ ಪಾವತಿ ಮಾಡುವುದರ ಜತೆಗೆ ಭ್ರಷ್ಟ ಅಧಿಕಾರಿಗಳ ವಿರುದ್ಧ ದೂರುಗಳನ್ನು ನೀಡಬಹುದು. ಹೀಗೆ ಸಾಕಷ್ಟು ಸೌಲಭ್ಯ ಹೊಂದಿರುವ ಬೆಸ್ಕಾಂ ಮಿತ್ರ ಆಪ್ ಇವತ್ತಿನಿಂದ ಲೋಕಾರ್ಪಣೆಗೊಂಡಿದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದಿದ್ದಾರೆ.
