ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ.
ಬೆಂಗಳೂರು: ಶ್ರೀರಾಮನವಮಿ ಹಾಗೂ ಮಹಾವೀರ ಜಯಂತಿ ಅಂಗವಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಏ.13 ಮತ್ತು ಏ. 17ರಂದು ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಒಂದು ವೇಳೆ ಆದೇಶವನ್ನು ಉಲ್ಲಂಘಿಸಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ಕಂಡು ಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಮಹಾವೀರ ಜಯಂತಿ, ರಾಮನವಮಿ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಪ್ರಾಣಿ ಹತ್ಯೆಯನ್ನೂ ಮಾಡದಂತೆ ಸೂಚನೆ ನೀಡಲಾಗಿದೆ.
