ನವದೆಹಲಿ(ಜೂ.06): ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗ ಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಡುವೆ ದ್ವಿಪಕ್ಷೀಯ ಮಾತುಕತೆ ನಿಗದಿಯಾಗಿಲ್ಲ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ.

ಶಾಂಘೈ ಸಹಕಾರ ಸಂಘಟನೆ ಶೃಂಗ ಸಭೆ ವೇಳೆ ಮೋದಿ-ಇಮ್ರಾನ್ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಪಾಕ್ ಪ್ರಧಾನಿಯೊಂದಿಗೆ ಯಾವುದೇ ಮಾತುಕತೆ ನಡೆಯುವುದಿಲ್ಲ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.

ಪ್ರಧಾನಿ ಮೋದಿ ಜೂ.13 ಮತ್ತು 14ರಂದು ಕಿರ್ಗಿಸ್ತಾನದ ರಾಜಧಾನಿ ಬಿಶ್ಕೆಕ್ ನಲ್ಲಿ ನಡೆಯುವ ಎಸ್ ಸಿಒ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. 

ಆದರೆ ಈ ವೇಳೆ ಇಮ್ರಾನ್ ಖಾನ್ ಜೊತೆ ಪ್ರಧಾನಿ ಮೋದಿ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ತಿಳಿಸಿದ್ದಾರೆ.