ರಾಮಗೋಪಾಲ್ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಶಿವಪಾಲ್ ಯಾದವ್, ರಾಮಗೋಪಾಲ್ ಬಿಜೆಪಿಯೊಂದಿಗೆ ಕೈಜೋಡಿಸಿದ್ದಾರೆ ಎಂದು ಹೇಳಿದ್ದಾರೆ.
ಲಕ್ನೋ (ಅ.23): ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿದ್ದಂತೆ, ಸಮಾಜವಾದಿ ಪಕ್ಷದಲ್ಲಿ ಬಿರುಕು ಹೆಚ್ಚಾಗತೊಡಗಿದೆ. ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಶಿವಪಾಲ್ ಯಾದವ್, ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮಗೋಪಾಲ್ ಯಾದವ್’ರನ್ನು ಹುದ್ದೆಯಿಂದ ಹಾಗೂ ಪಕ್ಷದಿಂದ ಆರು ವರ್ಷಗಳ ಅವಧಿಗೆ ಉಚ್ಚಾಟಿಸಿದ್ದಾರೆ.
ರಾಮಗೋಪಾಲ್ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಶಿವಪಾಲ್ ಯಾದವ್, ರಾಮಗೋಪಾಲ್ ಬಿಜೆಪಿಯೊಂದಿಗೆ ಕೈಜೋಡಿಸಿದ್ದಾರೆ ಎಂದು ಹೇಳಿದ್ದಾರೆ.
ಕಳೆದ ಕೆಲವು ದಿವಸಗಳಲ್ಲಿ ರಾಮಗೋಪಾಲ್ ಮೂರು ಬಾರಿ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ. ಅವರ ಮಗ ಅಕ್ಷಯ್ ಯಾದವ್ ಹಾಗೂ ಸೊಸೆ ಹಗರಣವೊಂದರಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಉಳಿಸಲು ರಾಮಗೋಪಾಲ್ ಯಾದವ್ ಬಿಜೆಪಿ ನಾಯಕರ ಸೂಚನೆಯಂತೆ ಕಾರ್ಯವೆಸಗುತ್ತಿದ್ದಾರೆ ಎಂದು ಶಿವಪಾಲ್ ಯಾದವ್ ಹೇಳಿದ್ದಾರೆ.