ಗೋ ಮಾರಾಟ ಕುರಿತು ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ಅಧಿಸೂಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸುತ್ತಾ, ಕೇಂದ್ರದಿಂದ ಬರುವ ಎಲ್ಲಾ ಅಧಿಸೂಚನೆಗಳನ್ನು ಅನುಸರಿಸಬೇಕೆಂಬ ಕಡ್ಡಾಯವಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು (ಮೇ.30): ಗೋ ಮಾರಾಟ ಕುರಿತು ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ಅಧಿಸೂಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸುತ್ತಾ, ಕೇಂದ್ರದಿಂದ ಬರುವ ಎಲ್ಲಾ ಅಧಿಸೂಚನೆಗಳನ್ನು ಅನುಸರಿಸಬೇಕೆಂಬ ಕಡ್ಡಾಯವಿಲ್ಲ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರವು ಎಲ್ಲಾ ಆಯಾಮಗಳಲ್ಲಿ ಯೋಚಿಸಿ, ಎಲ್ಲಾ ಸಮುದಾಯಗಳ ಅಭಿಪ್ರಾಯಗಳನ್ನು ತೆಗೆದುಕೊಂಡು ನಂತರ ಕೇಂದ್ರಕ್ಕೆ ಪ್ರತಿಕ್ರಿಯಿಸುತ್ತೇವೆ ಎಂದಿದ್ದಾರೆ.
ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡಾ ಸಿದ್ದರಾಮಯ್ಯನವರನ್ನು ಬೆಂಬಲಿಸಿ ಮಾತನಾಡಿದ್ದಾರೆ. ಕೇಂದ್ರದ ಅಧಿಸೂಚನೆಯನ್ನು ಪಾಲಿಸುವ ಅಗತ್ಯವಿಲ್ಲವೆಂದು ಹೇಳಿದ್ದಾರೆ.
