ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆಯುತ್ತಿರುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ಎನ್‌'ಇಇಟಿ-ನೀಟ್)ಯ ಯಶಸ್ಸನ್ನು ಪರಿಶೀಲಿಸಿದ ಬಳಿಕ, ಮುಂದಿನ ಹೆಜ್ಜೆಯ ಬಗ್ಗೆ ಚಿಂತಿಸಲು ನಿರ್ಧರಿಸಿದ್ದರಿಂದ, ಪ್ರಸ್ತುತ ಚಿಂತನೆ ತಡೆ ಹಿಡಿಯಲು ನಿರ್ಧರಿಸಲಾಗಿದೆ.

ನವದೆಹಲಿ(ಆ.24): ಮುಂದಿನ ವರ್ಷದಿಂದ ಆರಂಭಿಸಲುದ್ದೇಶಿಸಿದ್ದ ಎಂಜಿನಿಯರಿಂಗ್ ಪದವಿ ಪ್ರವೇಶಕ್ಕೆ ಮಾನ್ಯ ಪ್ರವೇಶ ಪರೀಕ್ಷೆ ಯೋಜನೆಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ (ಎಚ್‌ಆರ್‌ಡಿ) ಸಚಿವಾಲಯ ತಡೆ ನೀಡಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ರಾಷ್ಟ್ರೀಯ ಮಟ್ಟದ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುವುದಾಗಿ, ಮಾರ್ಚ್'ನಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಘೋಷಿಸಿತ್ತು.

ಆದರೆ ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆಯುತ್ತಿರುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ಎನ್‌'ಇಇಟಿ-ನೀಟ್)ಯ ಯಶಸ್ಸನ್ನು ಪರಿಶೀಲಿಸಿದ ಬಳಿಕ, ಮುಂದಿನ ಹೆಜ್ಜೆಯ ಬಗ್ಗೆ ಚಿಂತಿಸಲು ನಿರ್ಧರಿಸಿದ್ದರಿಂದ, ಪ್ರಸ್ತುತ ಚಿಂತನೆ ತಡೆ ಹಿಡಿಯಲು ನಿರ್ಧರಿಸಲಾಗಿದೆ.