ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಬಹುತೇಕ ಕಡೆ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಬೇಕಾಗಿದೆ.
ಬೆಂಗಳೂರು(ಡಿ.25): ಸನ್ನಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಅಧಿಕೃತ ಆದೇಶ ನೀಡಿದ್ದಾರೆ.
ಕಾರ್ಯಕ್ರಮದ ಬಗ್ಗೆ ಸೂಕ್ತ ಮಾಹಿತಿ ಕೇಳಲಾಗಿತ್ತು. ಆದರೆ ಆಯೋಜಕರು ಯಾವುದೇ ಮಾಹಿತಿ ನೀಡಿರಲಿಲ್ಲ. 8 ಸಾವಿರ ಟಿಕೆಟ್ ಮಾರಾಟ ಮಾಡಿರುವುದಾಗಿ ಆಯೋಜಕರು ಹೇಳಿದ್ದಾರೆ. ಗುಪ್ತಚರ ಇಲಾಖೆ ಮಾಹಿತಿ ಅನ್ವಯ 8 ಸಾವಿರಕ್ಕೂ ಅಧಿಕ ಜನ ಸೇರುವ ಸಾಧ್ಯತೆಯಿದೆ. ಅಲ್ಲದೇ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಬಹುತೇಕ ಕಡೆ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಬೇಕಾಗಿದೆ. ಈ ಎಲ್ಲಾ ಕಾರಣಗಳಿಂದ ಸನ್ನಿ ನೈಟ್ಸ್ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಅಧಿಕೃತ ಆದೇಶ ನೀಡಿದ್ದಾರೆ.
