ತಾವು ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಯಾವುದೇ ಆಸಕ್ತಿಯನ್ನು ಹೊಂದಿಲ್ಲ. ನಾನೇಕೆ ಚುನಾವಣೆಯಲ್ಲಿ ಸ್ಪರ್ಧಿಸಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು : ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಶನಿವಾರ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಾನೇಕೆ ಸ್ಪರ್ಧಿಸಲಿ? ನಾನು ಲೋಕಸಭೆ ಚುನಾವಣೆಗೆ ನಿಲ್ಲಲು ಆಸಕ್ತಿ ಹೊಂದಿಲ್ಲ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು. ಸಿದ್ದರಾಮಯ್ಯ ಅವರು ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ನೇಮಕವಾದ ಬಳಿಕ ಅವರು ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧಿಸಲಿದ್ದಾರೆ ಎಂಬ ಗುಸುಗುಸು ಕಾಂಗ್ರೆಸ್ ವಲಯದಲ್ಲಿ ಹರಡಿತ್ತು. ಶನಿವಾರ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.