ಹೊಸ 1000 ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ಬಿಡುವ ಯೋಜನೆಯಿಲ್ಲ ಎಂದು ಎಲ್ಲಾ ಊಹಾಪೋಹಗಳಿಗೆ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ತೆರೆ ಎಳೆದಿದ್ದಾರೆ.  

ನವದೆಹಲಿ (ಫೆ.22): ಹೊಸ 1000 ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ಬಿಡುವ ಯೋಜನೆಯಿಲ್ಲ ಎಂದು ಎಲ್ಲಾ ಊಹಾಪೋಹಗಳಿಗೆ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ತೆರೆ ಎಳೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

1000 ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತರುವ ಯೋಜನೆಯಿಲ್ಲ. 500 ರೂ. ನೋಟುಗಳ ಉತ್ಪಾದನೆ ಮತ್ತು ಪೂರೈಕೆಯನ್ನು ಹೆಚ್ಚಿಸುವತ್ತ ಗಮನ ಹರಿಸಲಾಗುತ್ತಿದೆ. ಕಡಿಮೆ ಮುಖಬೆಲೆಯ ನೋಟುಗಳ ುತ್ಪಾದನೆಗೆ ಹೆಚ್ಚಿನ ಗಮನ ನೀಡಲಾಗುತ್ತದೆ ಎಂದು ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

ಎಟಿಎಂಗಳಲ್ಲಿ ನಗದು ಕೊರತೆಯಿದೆ ಎನ್ನುವ ದೂರುಗಳು ಹೆಚ್ಚಾಗುತ್ತಿರುವುದನ್ನು ಉದ್ದೇಶಿಸಿ, ಅಗತ್ಯಕ್ಕೆ ತಕ್ಕಷ್ಟು ಮಾತ್ರ ವಿತ್ ಡ್ರಾ ಮಾಡಿಕೊಳ್ಳಿ ಎಂದು ವಿನಂತಿಸಿಕೊಂಡಿದ್ದಾರೆ.