ಜೆಡಿಎಸ್ ಬೆಂಬಲ ಬೇಕಾಗಿಲ್ಲ : ಸಿಎಂ ಸಿದ್ದರಾಮಯ್ಯ

First Published 6, Mar 2018, 8:10 AM IST
No poll alliance with JDS
Highlights

ರಾಜ್ಯದಲ್ಲಿ ನಮಗೆ ಜೆಡಿಎಸ್ ಜೊತೆ ಹೊಂದಾಣಿಕೆಯ ಅವಶ್ಯಕತೆ ಇಲ್ಲ. ರಾಜ್ಯಸಭಾ ಚುನಾವಣೆ ವಿಚಾರದಲ್ಲೂ ಜೆಡಿಎಸ್ ಜತೆ ಮಾತನಾಡಿಲ್ಲ, ಮಾತನಾಡುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು: ರಾಜ್ಯದಲ್ಲಿ ನಮಗೆ ಜೆಡಿಎಸ್ ಜೊತೆ ಹೊಂದಾಣಿಕೆಯ ಅವಶ್ಯಕತೆ ಇಲ್ಲ. ರಾಜ್ಯಸಭಾ ಚುನಾವಣೆ ವಿಚಾರದಲ್ಲೂ ಜೆಡಿಎಸ್ ಜತೆ ಮಾತನಾಡಿಲ್ಲ, ಮಾತನಾಡುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಮುಂದೆ ನಮ್ಮ ಸಹಾಯ ಬೇಕಾದಲ್ಲಿ ರಾಜ್ಯಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳಿ’ ಎಂಬ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದರು.

ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಂಗಳವಾರ ದೆಹಲಿಯಲ್ಲಿ ವರಿಷ್ಠರ ಜೊತೆ ಚರ್ಚಿಸುತ್ತೇನೆ. ಮೂರನೇ ಅಭ್ಯರ್ಥಿ ಹಾಕುವ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ವರಿಷ್ಠರೊಂದಿಗೆ ಸಮಾಲೋಚಿಸಿದ ನಂತರ ತೀರ್ಮಾನಿಸುತ್ತೇವೆ ಎಂದರು.

loader