ಮಕ್ಕಳ ಅಶ್ಲೀಲ ಚಿತ್ರ ವೆಬ್'ಸೈಟ್ ಮುಚ್ಚುವ ಸಂಬಂಧ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ವೇಳೆ ಸರ್ಕಾರ ಈ ಮಾಹಿತಿ ನೀಡಿದೆ. ಜೊತೆಗೆ ಕಳೆದ ತಿಂಗಳು ಮಕ್ಕಳ ಅಶ್ಲೀಲ ಚಿತ್ರಗಳನ್ನು ಪ್ರದರ್ಶಿಸುವ ೩೫೦೦ಕ್ಕೂ ಹೆಚ್ಚು ವೆಬ್‌ಗಳನ್ನು ಮುಚ್ಚಲಾಗಿದೆ ಎಂದು ಹೇಳಿದೆ. ಈ ನಡುವೆ ಶಾಲಾ ಬಸ್‌ಗಳಲ್ಲಿ ಜಾಮರ್ ಅಳವಡಿಕೆ ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿದೆ.
ನವದೆಹಲಿ(ಜು.15): ಮಕ್ಕಳಲ್ಲಿ ಹೆಚ್ಚುತ್ತಿರುವ ಅಶ್ಲೀಲ ಚಿತ್ರ ವೀಕ್ಷಣೆ ತಡೆಯುವ ನಿಟ್ಟಿನಲ್ಲಿ ಶಾಲಾ ಆವರಣದಲ್ಲಿ ಜಾಮರ್ ಅಳವಡಿಸುವ ಬಗ್ಗೆ ಪರಿಶೀಲಿಸುವಂತೆ ಸಿಬಿಎಸ್ಇ ಶಾಲೆಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಿದೆ.
ಮಕ್ಕಳ ಅಶ್ಲೀಲ ಚಿತ್ರ ವೆಬ್'ಸೈಟ್ ಮುಚ್ಚುವ ಸಂಬಂಧ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ವೇಳೆ ಸರ್ಕಾರ ಈ ಮಾಹಿತಿ ನೀಡಿದೆ. ಜೊತೆಗೆ ಕಳೆದ ತಿಂಗಳು ಮಕ್ಕಳ ಅಶ್ಲೀಲ ಚಿತ್ರಗಳನ್ನು ಪ್ರದರ್ಶಿಸುವ ೩೫೦೦ಕ್ಕೂ ಹೆಚ್ಚು ವೆಬ್ಗಳನ್ನು ಮುಚ್ಚಲಾಗಿದೆ ಎಂದು ಹೇಳಿದೆ. ಈ ನಡುವೆ ಶಾಲಾ ಬಸ್ಗಳಲ್ಲಿ ಜಾಮರ್ ಅಳವಡಿಕೆ ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿದೆ.
