ಅಡಕೆ ಆರೋಗ್ಯಕ್ಕೆ ಹಾನಿಕರ ಎಂದು ಕೇಂದ್ರ ಆರೋಗ್ಯ ಸಚಿವರು ಸಂಸತ್‌ನಲ್ಲಿ ಹೇಳಿದ್ದಾರೆಂಬ ಮಾಹಿತಿ ಲಭ್ಯವಾಗಿದ್ದು ಈ ಬಗ್ಗೆ ಅಡಕೆ ಬೆಳೆಗಾರರಿಗೆ ಯಾವುದೇ ಆತಂಕ ಬೇಡ ಎಂದು ಮಾಮ್ಕೋಸ್‌ ಉಪಾಧ್ಯಕ್ಷ ವೈ.ಎಸ್‌. ಸುಬ್ರಮಣ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನರಸಿಂಹರಾಜಪುರ: ಅಡಕೆ ಆರೋಗ್ಯಕ್ಕೆ ಹಾನಿಕರ ಎಂದು ಕೇಂದ್ರ ಆರೋಗ್ಯ ಸಚಿವರು ಸಂಸತ್‌ನಲ್ಲಿ ಹೇಳಿದ್ದಾರೆಂಬ ಮಾಹಿತಿ ಲಭ್ಯವಾಗಿದ್ದು ಈ ಬಗ್ಗೆ ಅಡಕೆ ಬೆಳೆಗಾರರಿಗೆ ಯಾವುದೇ ಆತಂಕ ಬೇಡ ಎಂದು ಮಾಮ್ಕೋಸ್‌ ಉಪಾಧ್ಯಕ್ಷ ವೈ.ಎಸ್‌. ಸುಬ್ರಮಣ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಾಮ್ಕೋಸ್‌ ಹಾಗೂ ಇತರೆ ಅಡಕೆ ಮಾರಾಟ ಸಹಕಾರ ಸಂಘಗಳ ನಿಯೋಗ ಶೀಘ್ರದಲ್ಲೇ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಲಿದೆ.

ಅಡಕೆ ಬೆಳೆಗಾರರ ಸಮಸ್ಯೆ ಬಂದಾಗಲೆಲ್ಲಾ ಕೇಂದ್ರ ಸರ್ಕಾರ ಹಾಗೂ ಅಡಕೆ ಬೆಳೆಯುವ ಭಾಗದ ಸಂಸತ್‌ ಸದಸ್ಯರು ಅಡಕೆ ಬೆಳೆಗಾರರ ನೆರವಿಗೆ ಬಂದಿದ್ದಾರೆ. ಅಡಕೆ ಬೆಳೆಗಾರರು ಆತಂಕ ಪಡುವುದು ಬೇಡ ಎಂದು ಹೇಳಿದ್ದಾರೆ.