‘ನನ್ನ ಕರ್ಮಭೂಮಿ ರಾಮನಗರವನ್ನು ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ’ ಎಂದು ಹೇಳಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಉತ್ತರ ಕರ್ನಾಟಕದ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರವೊಂದರಿಂದ ಸ್ಪರ್ಧಿಸುತ್ತಾರೆ ಎನ್ನುವ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ.

ರಾಮನಗರ: ‘ನನ್ನ ಕರ್ಮಭೂಮಿ ರಾಮನಗರವನ್ನು ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ’ ಎಂದು ಹೇಳಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಉತ್ತರ ಕರ್ನಾಟಕದ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರವೊಂದರಿಂದ ಸ್ಪರ್ಧಿಸುತ್ತಾರೆ ಎನ್ನುವ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

‘1 ವರ್ಷದಿಂದ ನನಗೂ ಉತ್ತರ ಕರ್ನಾಟಕದ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಒತ್ತಡ ಹೆಚ್ಚಾಗಿದೆ. ಆದರೆ, ರಾಮಗರ ನನ್ನ ಕರ್ಮಭೂಮಿ. ರಾಮನಗರ ಬಿಟ್ಟು ಹೋಗಲು ಜನರು ಬಿಡುತ್ತಾರೆಯೇ’ ಎಂದ ಅವರು, ರಾಮನಗರ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದರು.

‘ಸಿದ್ದರಾಮಯ್ಯ ತಮ್ಮ ಪುತ್ರನಿಗೆ ವರುಣಾ ಕ್ಷೇತ್ರದಲ್ಲಿ ಅವಕಾಶ ಮಾಡಿಕೊಟ್ಟು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹಾಗೂ ಯಡಿಯೂರಪ್ಪ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವ ಮಾತುಗಳು ಕೇಳಿ ಬರುತ್ತಿವೆ. ಪಕ್ಷ ಸಂಘಟನೆ ಹಾಗೂ ಅಧಿಕಾರಕ್ಕೆ ಬರುವ ಉದ್ದೇಶದಿಂದ ನಾಯಕರು ಚಿಂತನೆ ನಡೆಸುತ್ತಾರೆ’ ಎಂದು ತಿಳಿಸಿದರು.