ರಾಹುಲ್ ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಹೋಗಲ್ಲ! ಲೋಕಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ! ಆಹ್ವಾನ ಬಂದರೂ ರಾಹುಲ್ ಕಾರ್ಯಕ್ರಮಕ್ಕೆ ತೆರಳಲ್ಲ 

ನವದೆಹಲಿ(ಆ.30): ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ತೆರಳುವ ಮಾತೇ ಇಲ್ಲ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೂರು ದಿನಗಳ ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ, ಆರ್ ಎಸ್ ಎಸ್ ಆಹ್ವಾನ ನೀಡಿದರೂ ರಾಹುಲ್ ಕಾರ್ಯಕ್ರಮಕ್ಕೆ ತೆರಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

'ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿರುವ ವಿಚಾರ ಕೇವಲ ಮಾಧ್ಯಮಗಳಲ್ಲಿ ಮಾತ್ರ ಪ್ರಸಾರವಾಗುತ್ತಿದೆ. ಆದರೆ ನಮಗಿನ್ನೂ ಅಹ್ವಾನದ ಪ್ರತಿ ದೊರೆತಿಲ್ಲ. ಒಂದು ವೇಳೆ ದೊರೆತರೂ ರಾಹುಲ್ ಕಾರ್ಯಕ್ರಮಕ್ಕೆ ತೆರಳುವುದಿಲ್ಲ ಎಂದು ಖರ್ಗೆ ಹೇಳಿದರು. 

ಆರ್ ಎಸ್ ಎಸ್ ತನ್ನ ಪ್ರತೀಯೊಂದು ಕಾರ್ಯಕ್ರಮವನ್ನೂ 2019ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪಿಸುತ್ತಿವೆ. ಹೀಗಾಗಿ ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ತೆರಳುವ ಪ್ರಶ್ನೆಯೇ ಇಲ್ಲ ಎಂದು ಖರ್ಗೆ ತಿಳಿಸಿದ್ದಾರೆ.