ಒಂದು ವಿಷಯ ಸ್ಪಷ್ಟವಾಗಿರಲಿ, ಆ ಕ್ರಮವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ದೇಶದ ಆರ್ಥಿಕ ಪರಿಸ್ಥಿಯನ್ನು ಶುದ್ಧೀಕರಿಸಲು ಪ್ರಧಾನಿ ಈ ಕ್ರಮ ಕೈಗೊಂಡಿದ್ದಾರೆ, ಇದನ್ನು ಮುಂದುವರೆಸುತ್ತೇವೆ, ಎಂದು ಜೇಟ್ಲಿ ಹೇಳಿದ್ದಾರೆ.
ನವದೆಹಲಿ (ನ.17): ದೇಶದ ಆರ್ಥಿಕ ಪರಿಸ್ಥಿಯನ್ನು ಶುದ್ಧೀಕರಿಸಲು ಕೈಗೊಂಡಿರುವ ನೋಟಿನ ಅಪಮೌಲ್ಯೀಕರಣ ಕ್ರಮದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲವೆಂದು ಕೇಂದ್ರ ಸರ್ಕಾರದ ಕ್ರಮನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳಿಗೆ ಹಣಕಾಸು ಸಚಿವ ಅರುಣ್ ಜೇಟ್ಲಿ ಖಡಕ್ ಪ್ರತ್ಯುತ್ತರ ನೀಡಿದ್ದಾರೆ.
ಆಮ್ ಆದ್ಮಿ ಪಕ್ಷ ಹಾಗೂ ತೃಣಮೂಲ ಕಾಂಗ್ರೆಸ್, ನೋಟು ನಿಷೇಧವನ್ನು ಹಿಂಪಡೆಯಬೇಕೆಂದು ಒತ್ತಾಯಿಸುತ್ತಿವೆ. ಒಂದು ವಿಷಯ ಸ್ಪಷ್ಟವಾಗಿರಲಿ, ಆ ಕ್ರಮವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ದೇಶದ ಆರ್ಥಿಕ ಪರಿಸ್ಥಿಯನ್ನು ಶುದ್ಧೀಕರಿಸಲು ಪ್ರಧಾನಿ ಈ ಕ್ರಮ ಕೈಗೊಂಡಿದ್ದಾರೆ, ಇದನ್ನು ಮುಂದುವರೆಸುತ್ತೇವೆ, ಎಂದು ಜೇಟ್ಲಿ ಹೇಳಿದ್ದಾರೆ.
ನೋಟು ನಿಷೇಧ ಕ್ರಮವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಕಳೆದೆರಡು ದಿನಗಳಿಂದ ಮಮತಾ ಬ್ಯಾನರ್ಜಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೂರು ದಿನಗಳೋಳಗೆ ಸರ್ಕಾರ ಬೇಟಡಿಕೆಯನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಅವರು ಕೇಂದ್ರ ಸರ್ಕಾರವನ್ನು ಎಚ್ಚರಿಸಿದ್ದಾರೆ.
