ಮುಂದಿನ ಆದೇಶ ಬರುವವರೆಗೂ ತಮಿಳುನಾಡಿಗೆ 2 ಸಾವಿರ ಕ್ಯೂಸೆಕ್ಸ್ ನೀರು ಬಿಡಿ ಎನ್ನುವ ಸುಪ್ರೀಂಕೋರ್ಟ್ ಮಧ್ಯಂತರ ಆದೇಶವನ್ನು ಪಾಲಿಸಲು ಕರ್ನಾಟಕ ನಿರಾಕರಿಸಿದೆ. ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಕರ್ನಾಟಕ ಸ್ಪಷ್ಟವಾಗಿ ಹೇಳಿದೆ.
ಬೆಂಗಳೂರು (ಮಾ.24): ಮುಂದಿನ ಆದೇಶ ಬರುವವರೆಗೂ ತಮಿಳುನಾಡಿಗೆ 2 ಸಾವಿರ ಕ್ಯೂಸೆಕ್ಸ್ ನೀರು ಬಿಡಿ ಎನ್ನುವ ಸುಪ್ರೀಂಕೋರ್ಟ್ ಮಧ್ಯಂತರ ಆದೇಶವನ್ನು ಪಾಲಿಸಲು ಕರ್ನಾಟಕ ನಿರಾಕರಿಸಿದೆ. ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಕರ್ನಾಟಕ ಸ್ಪಷ್ಟವಾಗಿ ಹೇಳಿದೆ.
ನಮಗೆ ಕುಡಿಯುವ ನೀರಿನ ಕೊರತೆಯಿದೆ. ಬೆಂಗಳೂರು, ಮೈಸೂರು ಮತ್ತು ಸುತ್ತಮುತ್ತಲಿನ ಹಳ್ಳಿಗಳಿಗೆ ಕುಡಿಯುವ ನೀರು ಪೈರೈಸಲು 3-4 ಟಿಎಂಸಿ ಅಡಿಗಳಷ್ಟು ನೀರಿನ ಅಭಾವಿದೆ. ಹಾಗಾಗಿ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲವೆಂದು ಜಲ ಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
