ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಂತಿಲ್ಲ. ನಾನು ಅದರಲ್ಲಿ ಮುಂದುವರಿದಿದ್ದೇನೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮುಖಂಡ ರಾಮ್ ಲಾಲ್ ಜೊತೆ ಇದ್ರ ಬಗ್ಗೆ ಈಗಾಗಲೇ ಚರ್ಚೆ ಆಗಿದೆ ಎಂದು ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. 

ಬೆಂಗಳೂರು (ನ.21): ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಂತಿಲ್ಲ. ನಾನು ಅದರಲ್ಲಿ ಮುಂದುವರಿದಿದ್ದೇನೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮುಖಂಡ ರಾಮ್ ಲಾಲ್ ಜೊತೆ ಇದ್ರ ಬಗ್ಗೆ ಈಗಾಗಲೇ ಚರ್ಚೆ ಆಗಿದೆ ಎಂದು ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಎಸ್ ವೈ ಹಾಗೂ ನಾನು ಆ ಸಭೆಯಲ್ಲಿ ಭಾಗಿಯಾಗಿದ್ದೇವೆ. ರಾಮ್ ಲಾಲ್ ಕೂಡ ರಾಯಣ್ಣ ಬ್ರಿಗೇಡ್ ನಿಲ್ಲಸಬೇಡಿ. ನೀವು, ಬಿಎಸ್ ವೈ ರಾಯಣ್ಣ ಬ್ರಿಗೇಡ್ ಮುಂದುವರೆಸಿ ಎಂದು ಸಲಹೆ ನೀಡಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ರಾಯಣ್ಣ ಬ್ರಿಗೇಡ್ಗೆ ಪದಾಧಿಕಾರಿಗಳನ್ನ ನೇಮಕ ಮಾಡಲಾಗಿದೆ. ಸಾಧು ಸಂತರು ಅದಕ್ಕೆ ಬೆಂಬಲ ನೀಡಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ. 

ಡಿ. 6 ರಂದು ನಂದಗಢದಲ್ಲಿ ನೂತನ ಪದಾಧಿಕಾರಿಗಳು ಪ್ರತಿಜ್ನಾವಿಧಿ ಸ್ವೀಕಾರ ಮಾಡಲಿದ್ದಾರೆ. ಎಲ್ಲ ಮಠಾಧಿಪತಿಗಳು ಇದರಲ್ಲಿ ಭಾಗವಹಿಸಲಿದ್ದಾರೆ. ಇದೇ 27 ರಂದು ಬಿಜೆಪಿ ಹಿಂದುಳಿದ ಸಮಾವೇಶ ಹಿನ್ನಲೆಯಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷರು ಬರುತ್ತಿದ್ದಾರೆ ಎಂದಿದ್ದಾರೆ.