ಸುಪ್ರೀಂಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಕನ್ನಡ ಮಾಧ್ಯಮ ಕಡ್ಡಾಯಗೊಳಿಸಲು ಸಾಧ್ಯವಾಗುವುದಿಲ್ಲ. ಮಕ್ಕಳ ಭಾಷಾ ಮಾಧ್ಯಮದ ಕುರಿತು ಪೋಷಕರದ್ದೇ ಅಂತಿಮ ನಿರ್ಧಾರ ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. ಹೀಗಾಗಿ ಸಂವಿಧಾನ ತಿದ್ದುಪಡಿಯೊಂದೇ ಪರಿಹಾರ. ಕುರಿತಂತೆ ಪ್ರಧಾನಿ ಮೋದಿಯವರಿಗೆ ಬರೆದ ಪತ್ರಕ್ಕೆ ಪ್ರತಿಕ್ರಿಯೆ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು (ಮೇ.04): ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಕಡ್ಡಾಯಗೊಳಿಸುವ ಸಂಬಂಧ ಸಂವಿಧಾನ ತಿದ್ದುಪಡಿ ಮಾಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರೂ ಈವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ನಿರ್ಮಿಸಿರುವ ಶತಮಾನೋತ್ಸವ ಕಟ್ಟಡ ಉದ್ಘಾಟಿಸಿ ಮಾತನಾಡುವ ವೇಳೆ ಕನ್ನಡ ಮಾಧ್ಯಮ ಜಾರಿ ಕುರಿತು ಸಭಿಕರೊಬ್ಬರ ಮಾತಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ,

ಸುಪ್ರೀಂಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಕನ್ನಡ ಮಾಧ್ಯಮ ಕಡ್ಡಾಯಗೊಳಿಸಲು ಸಾಧ್ಯವಾಗುವುದಿಲ್ಲ. ಮಕ್ಕಳ ಭಾಷಾ ಮಾಧ್ಯಮದ ಕುರಿತು ಪೋಷಕರದ್ದೇ ಅಂತಿಮ ನಿರ್ಧಾರ ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. ಹೀಗಾಗಿ ಸಂವಿಧಾನ ತಿದ್ದುಪಡಿಯೊಂದೇ ಪರಿಹಾರ. ಕುರಿತಂತೆ ಪ್ರಧಾನಿ ಮೋದಿಯವರಿಗೆ ಬರೆದ ಪತ್ರಕ್ಕೆ ಪ್ರತಿಕ್ರಿಯೆ ಬಂದಿಲ್ಲ ಎಂದರು.